ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಯಮತ್ತೂರು: ಪ್ರಧಾನಿ ನರೇಂದ್ರ ಮೋದಿ ರೋಡ್‌ ಶೋಗೆ ಅನುಮತಿ

Published 15 ಮಾರ್ಚ್ 2024, 14:27 IST
Last Updated 15 ಮಾರ್ಚ್ 2024, 14:27 IST
ಅಕ್ಷರ ಗಾತ್ರ

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಅವರು ಇದೇ 18ರಂದು ಕೊಯಮತ್ತೂರಿನಲ್ಲಿ ನಡೆಸಲಿರುವ ನಾಲ್ಕು ಕಿ.ಮೀ ರೋಡ್‌ ಶೋಗೆ ಕೆಲವು ಷರತ್ತುಗಳೊಂದಿಗೆ ಅನುಮತಿ ನೀಡುವಂತೆ ಮದ್ರಾಸ್‌ ಹೈಕೋರ್ಟ್‌, ಪೊಲೀಸರಿಗೆ ಸೂಚಿಸಿದೆ.

ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಭದ್ರತಾ ಕಾರಣಗಳನ್ನು ನೀಡಿ ಪೊಲೀಸರು ಪ್ರಧಾನಿ ರೋಡ್‌ ಶೋಗೆ ಅನುಮತಿ ನಿರಾಕರಿಸಿದ್ದರು. ಇದನ್ನು ಪ್ರಶ್ನಿಸಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಜೆ. ರಮೇಶ್‌ ಕುಮಾರ್‌ ಹೈಕೋರ್ಟ್‌ ಮೊರೆ ಹೋಗಿದ್ದರು.

‘ರಾಜಕೀಯ ಕಾರಣಕ್ಕಾಗಿ ರೋಡ್‌ ಶೋಗೆ ಅನುಮತಿ ನಿರಾಕರಿಸಲಾಗಿದೆ. ಇದು ಸಮಂಜಸವಲ್ಲ. ಸಂವಿಧಾನದ 19ನೇ ವಿಧಿಯಡಿ ಖಾತರಿಪಡಿಸಲಾಗಿರುವ ಮೂಲಭೂತ ಹಕ್ಕಿನ ಉಲ್ಲಂಘನೆಯಾಗುತ್ತದೆ’ ಎಂದು ಅವರು ನ್ಯಾಯಾಲಯದ ಗಮನಕ್ಕೆ ತಂದರು.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್‌. ಆನಂದ್‌ ವೆಂಕಟೇಶ್‌ ಅವರು, ಷರತ್ತುಗಳೊಂದಿಗೆ ಅನುಮತಿ ನೀಡುವಂತೆ ಆರ್‌.ಎಸ್‌.ಪುರಂ ವಲಯದ ಸಹಾಯಕ ಪೊಲೀಸ್‌ ಆಯುಕ್ತರಿಗೆ ನಿರ್ದೇಶನ ನೀಡಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT