ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮರಾವತಿ ಒಳ ವರ್ತುಲ ರಸ್ತೆ ಹಗರಣ | ನಾಯ್ಡು ನಿರೀಕ್ಷಣಾ ಜಾಮೀನು ಅರ್ಜಿ ನ. 7ಕ್ಕೆ

ಅಮರಾವತಿ ಒಳ ವರ್ತುಲ ರಸ್ತೆ ಹಗರಣದ ಪ್ರಕರಣ
Published 18 ಅಕ್ಟೋಬರ್ 2023, 16:21 IST
Last Updated 18 ಅಕ್ಟೋಬರ್ 2023, 16:21 IST
ಅಕ್ಷರ ಗಾತ್ರ

ಅಮರಾವತಿ: ಅಮರಾವತಿ ಒಳ ವರ್ತುಲ ರಸ್ತೆಯ ಹಗರಣಕ್ಕೆ ಸಂಬಂಧಿಸಿದಂತೆ ಟಿಡಿಪಿ ಮುಖ್ಯಸ್ಥ ಎನ್‌. ಚಂದ್ರಬಾಬು ನಾಯ್ಡು ಅವರ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಆಂಧ್ರ ಪ್ರದೇಶ ಹೈಕೋರ್ಟ್‌ ನವೆಂಬರ್‌ 7ಕ್ಕೆ ಮುಂದೂಡಿದೆ.

ನಾಯ್ಡು ಅವರ ಅಧಿಕಾರದ ಅವಧಿಯಲ್ಲಿ (2014–2019) ಕೆಲವರಿಗೆ ಅನುಕೂಲ ಮಾಡಿಕೊಡಲು ಒಳ ವರ್ತುಲ ರಸ್ತೆಗೆ ಸಂಬಂಧಿಸಿದಂತೆ ಅಮರಾವತಿ ನಗರದ ಮಾಸ್ಟರ್‌ ಪ್ಲಾನ್‌ ಅನ್ನು ತಿರುಚಲಾಗಿದೆ ಎಂಬ ಆರೋಪದ ಕುರಿತ ಪ್ರಕರಣ ಇದಾಗಿದೆ.

ಆಂಧ್ರ ಪ್ರದೇಶದ ಸಿಐಡಿ ಪರ ವಕೀಲ ಅಡ್ವೊಕೇಟ್‌ ಜನರಲ್‌ ಎಸ್‌. ಶ್ರೀರಾಮ್‌ ಮತ್ತು ನಾಯ್ಡು ಪರ ವಕೀಲ ಸಿದ್ಧಾರ್ಥ ಲೂತ್ರಾ ಹೈಕೋರ್ಟ್‌ನಲ್ಲಿ ಹಾಜರಿದ್ದರು.

ಕೌಶಲ ಅಭಿವೃದ್ಧಿ ನಿಗಮದ ₹300 ಕೋಟಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿರುವ ನಾಯ್ಡು ಅವರು, ಸದ್ಯ ಆಂಧ್ರ ಪ್ರದೇಶದ ರಾಜಮಹೇಂದ್ರವರಂ ಕಾರಾಗೃಹದಲ್ಲಿ ನ್ಯಾಯಾಂಗ ವಶದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT