ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ: ಕೇಜ್ರಿವಾಲ್ ವಿರುದ್ದ ಸಮನ್ಸ್‌ ವಜಾಗೊಳಿಸಿದ HC

Published 6 ಫೆಬ್ರುವರಿ 2024, 11:10 IST
Last Updated 6 ಫೆಬ್ರುವರಿ 2024, 11:10 IST
ಅಕ್ಷರ ಗಾತ್ರ

ಪಣಜಿ: ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ವಿರುದ್ಧ ಸಮನ್ಸ್ ಹೊರಡಿಸಿದ್ದ ಮ್ಯಾಜಿಸ್ಟ್ರೇಟ್‌ ಆದೇಶವನ್ನು ಬಾಂಬೆ ಹೈಕೋರ್ಟ್‌ನ ಗೋವಾ ಪೀಠ ಮಂಗಳವಾರ ವಜಾಗೊಳಿಸಿದೆ.

2017ರಲ್ಲಿ ನಡೆದ ಗೋವಾ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕೇಜ್ರಿವಾಲ್ ವಿರುದ್ಧ ದೂರು ದಾಖಲಿಸಲಾಗಿತ್ತು. ಇದನ್ನು ಆಧರಿಸಿ ಸಮನ್ಸ್ ಜಾರಿಗೊಳಿಸಲಾಗಿತ್ತು. ಇದನ್ನು ಹೈಕೋರ್ಟ್ ವಜಾಗೊಳಿಸಿದೆ ಎಂದು ಪಕ್ಷದ ಗೋವಾ ವಿಭಾಗದ ಮುಖ್ಯಸ್ಥ ಅಮಿತ್ ಪಾಲೇಕರ್ ತಿಳಿಸಿದ್ದಾರೆ.

ಕೇಜ್ರಿವಾಲ್ ವಿರುದ್ಧ ಸಲ್ಲಿಕೆಯಾಗಿದ್ದ ಆರೋಪಪಟ್ಟಿ ಪರಿಗಣಿಸಿ ಜೆಎಂಎಫ್‌ಸಿ ನ್ಯಾಯಾಲಯದ ಮ್ಯಾಜಿಸ್ಟ್ರೇಟ್‌ ಅವರು ಪ್ರಜಾಪ್ರತಿನಿಧಿ ಕಾಯ್ದೆಯಡಿ ಸಮನ್ಸ್ ಜಾರಿಗೊಳಿಸಿದ್ದರು. ಇದರಲ್ಲಿ ಲಂಚದ ಆರೋಪ ಮಾಡಲಾಗಿತ್ತು.

‘ಕಳೆದ ನವೆಂಬರ್‌ನಲ್ಲಿ ಸಮನ್ಸ್‌ ಜಾರಿಗೊಳಿಸಿದಾಗ ಕೇಜ್ರಿವಾಲ್‌ ನ್ಯಾಯಾಲಯದ ಮುಂದೆ ಹಾಜರಾಗಿದ್ದರು. ಜತೆಗೆ ಸಮನ್ಸ್ ಕುರಿತು ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಕಾಲಾವಕಾಶ ಕೋರಿದ್ದರು. ಇದೇ ಪ್ರಕರಣದ ವಿಚಾರಣೆ ಫೆ. 12ರಂದು ಮ್ಯಾಜಿಸ್ಟ್ರೇಟ್ ಎದುರು ಬರಲಿದೆ’ ಎಂದು ಪಾಲೇಕರ್‌ ತಿಳಿಸಿದ್ದಾರೆ.

2017ರ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಯಾವುದೇ ಖಾತೆ ತೆರೆದಿರಲಿಲ್ಲ. 2022ರ ಚುನಾವಣೆಯಲ್ಲಿ ಪಕ್ಷವು 2 ಸ್ಥಾನಗಳಲ್ಲಿ ಜಯ ಸಾಧಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT