ಪ್ರಯಾಗ್ರಾಜ್: 2025ರ ‘ಇಂಡಿಯನ್ ಸ್ಟೇಟ್ ವಿರುದ್ಧದ ಹೋರಾಟ’ ಎಂಬ ವಿವಾದಿತ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ ದಾಖಲಿಸಲು ಕೋರಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾ ಮಾಡಿದೆ.

2025ರಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಕಚೇರಿಯ ಉದ್ಘಾಟನೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ, ನಾವು ಈಗ ಬಿಜೆಪಿ, ಆರ್ಎಸ್ಎಸ್ ಮತ್ತು ಇಂಡಿಯನ್ ಸ್ಟೇಟ್(ಭಾರತ ಸರ್ಕಾರ) ವಿರುದ್ಧವೇ ಹೋರಾಡುತ್ತಿದ್ದೇವೆ ಎಂದು ಹೇಳಿಕೆ ನೀಡಿದ್ದಾರೆ ಎಂದು ಸಿಮ್ರನ್ ಗುಪ್ತಾ ಎಂಬುವವರು, ರಾಹುಲ್ ವಿರುದ್ಧ ಎಫ್ಐಆರ್ ದಾಖಲಿಸಲು ನಿರ್ದೇಶನ ಕೋರಿದ್ದರು.

ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ ದಾಖಲಿಸಲು ನಿರಾಕರಿಸಿದ್ದ ಸಂಭಾಲ್ ನ್ಯಾಯಾಲಯದ ಆದೇಶ ಪ್ರಶ್ನಿಸಿ ಸಿಮ್ರನ್, ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಕ್ರಮ್ ಡಿ ಚೌಹಾಣ್, ರಾಹುಲ್ ವಿರುದ್ಧ ಎಫ್ಐಆರ್ ದಾಖಲಿಸಲು ನಿರಾಕರಿಸಿದ್ದು, ಅರ್ಜಿ ವಜಾ ಮಾಡಿದ್ದಾರೆ.

ರಾಹುಲ್ ಹೇಳಿಕೆಯು ಸಾರ್ವಜನಿಕರ ಭಾವನೆಗಳಿಗೆ ಧಕ್ಕೆ ಉಂಟುಮಾಡಿದೆ. ದೇಶವನ್ನು ಅಸ್ಥಿರಗೊಳಿಸುವ ಉದ್ದೇಶದಿಂದ ಕೂಡಿದ ದೇಶದ್ರೋಹ ಮತ್ತು ರಾಷ್ಟ್ರವಿರೋಧಿ ಹೇಳಿಕೆಯಾಗಿದೆ ಎಂದು ಅರ್ಜಿದಾರರು ವಾದಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.