ಮಂಗಳವಾರ, 25 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೃಷ್ಣ ಜನ್ಮಭೂಮಿ–ಶಾಹಿ ಈದ್ಗಾ ಪ್ರಕರಣ: ತೀರ್ಪು ಕಾಯ್ದಿರಿಸಿದ ಅಲಹಾಬಾದ್ ಹೈಕೋರ್ಟ್

Published 31 ಮೇ 2024, 9:28 IST
Last Updated 31 ಮೇ 2024, 9:28 IST
ಅಕ್ಷರ ಗಾತ್ರ

ಪ್ರಯಾಗ್‌ರಾಜ್: ಮಥುರಾದಲ್ಲಿರುವ ಕೃಷ್ಣ ಜನ್ಮಭೂಮಿ ಮತ್ತು ಶಾಹಿ ಈದ್ಗಾ ಸ್ಥಳ ನಿರ್ವಹಣಾ ವಿವಾದ ಕುರಿತ ಪ್ರಕರಣದ ವಿಚಾರಣೆ ನಡೆಸುತ್ತಿರುವ ಅಲಹಾಬಾದ್ ಹೈಕೋರ್ಟ್‌, ತನ್ನ ತೀರ್ಪನ್ನು ಶುಕ್ರವಾರ ಕಾಯ್ದಿರಿಸಿತು.

ಕೃಷ್ಣ ಮಂದಿರಕ್ಕೆ ಹೊಂದಿಕೊಂಡಿರುವ ಶಾಹಿ ಈದ್ಗಾ ಮಸೀದಿ ತೆರವು ಕೋರಿ ಹಲವು ಅರ್ಜಿಗಳನ್ನು ಸಲ್ಲಿಕೆಯಾಗಿದ್ದವು. ಮೊಘಲ್ ದೊರೆ ಔರಂಗಜೇಬ್‌ನ ಅವಧಿಯಲ್ಲಿ ದೇವಾಲಯ ನೆಲಸಮಗೊಳಿಸಿ, ಅದೇ ಜಾಗದಲ್ಲಿ ಮಸೀದಿ ನಿರ್ಮಿಸಲಾಗಿತ್ತು ಎಂದು ಹಿಂದೂ ಪರ ಅರ್ಜಿಯಲ್ಲಿ ಆರೋಪಿಸಲಾಗಿತ್ತು.

‘ಪೂಜಾ ಸ್ಥಳ ಕುರಿತು 1991ರ ವಿಶೇಷ ಅವಕಾಶ ಕಾಯ್ದೆ ಅಡಿಯಲ್ಲಿ ಸಲ್ಲಿಕೆಯಾದ ಅರ್ಜಿಗಳು ಅನರ್ಹ. ಈ ಕಾಯ್ದೆಯಡಿ ಯಾವುದೇ ಪೂಜಾ ಸ್ಥಳದ ಪರಿವರ್ತನೆಯನ್ನು ನಿಷೇಧಿಸಿದೆ. ಜತೆಗೆ 1947ರ ಆ. 15ಕ್ಕೆ ಸಂಬಂಧಿಸಿದಂತೆ ಅಸ್ಥಿತ್ವದಲ್ಲಿರುವ ಅಂಥ ಧಾರ್ಮಿಕ ಸ್ಥಳಗಳ ಸ್ವರೂಪವನ್ನು ಕಾಪಾಡಬೇಕು’ ಎಂದು ಮುಸ್ಲಿಂ ಪರ ವಕೀಲರು ಪೀಠದ ಮುಂದೆ ವಾದ ಮಂಡಿಸಿದರು.

ಪ್ರಕರಣದ ವಾದ ಮತ್ತು ಪ್ರತಿವಾದವನ್ನು ಆಲಿಸಿದ ನ್ಯಾ. ಮಯಾಂಕ್ ಕುಮಾರ್ ಜೈನ್ ಅವರು, ತೀರ್ಪನ್ನು ಕಾಯ್ದರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT