ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರಿಮಿನಲ್ ಮಾನಹಾನಿ ಪ್ರಕರಣ| ಮಧ್ಯಪ್ರದೇಶ ಮಾಜಿ ಸಿ.ಎಂ ವಿರುದ್ಧದ ವಾರಂಟ್‌ಗೆ ತಡೆ

Published 4 ಏಪ್ರಿಲ್ 2024, 12:26 IST
Last Updated 4 ಏಪ್ರಿಲ್ 2024, 12:26 IST
ಅಕ್ಷರ ಗಾತ್ರ

ಜಬಲ್‌ಪುರ: ಕ್ರಿಮಿನಲ್ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ವಿ.ಡಿ.ಶರ್ಮಾ ವಿರುದ್ಧ ವಿಶೇಷ ಕೋರ್ಟ್ ಹೊರಡಿಸಿದ್ದ ವಾರಂಟ್‌ಗೆ, ಹೈಕೋರ್ಟ್ ತಡೆ ನೀಡಿದೆ.

ಈ ಇಬ್ಬರೂ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದಾರೆ ಮತ್ತು ಆ ಸಂಬಂಧಿತ ಕೆಲಸದಲ್ಲಿ ನಿರತರಾಗಿದ್ದಾರೆ ಎಂಬುದನ್ನು ಕೋರ್ಟ್ ಪರಿಗಣಿಸಿತು. ರಾಜ್ಯಸಭೆ ಸದಸ್ಯ, ಕಾಂಗ್ರೆಸ್‌ ಪಕ್ಷದ ವಿವೇಕ್‌ ತಂಖಾ ಈ ಮೊಕದ್ದಮೆ ದಾಖಲಿಸಿದ್ದರು.

ಚೌಹಾಣ್‌ ಅವರು ವಿದಿಶಾ ಹಾಗೂ ಶರ್ಮಾ ಅವರು ಖಜುರಾಹೊ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದಾರೆ. ‘ಈಗ ನೀಡಿರುವ ವಾರಂಟ್‌ಗೆ ತಡೆ ನೀಡಲಾಗಿದೆ. ಮುಂದಿನ ವಿಚಾರಣೆವರೆಗೆ ಮತ್ತೆ ವಾರಂಟ್‌ ನೀಡಬಾರದು’ ಎಂದು ನ್ಯಾಯಮೂರ್ತಿ ಸಂಜಯ್ ದ್ವಿವೇದಿ ಆದೇಶಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT