ಲಖನೌ: ‘ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೂ ಕೆಲ ಮಿತಿ ಇದೆ. ಅಭಿವ್ಯಕ್ತಿ ಸ್ವಾತಂತ್ರ್ಯ ಎಂದರೆ ಭಾರತೀಯ ಸೇನೆ, ಯಾವುದೇ ವ್ಯಕ್ತಿ ವಿರುದ್ಧ ಮಾನಹಾನಿ ಹೇಳಿಕೆ ನೀಡಬಹುದು ಎಂಬ ಸ್ವಾತಂತ್ರ್ಯವಲ್ಲ’ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ.

2022ರ ಭಾರತ್ ಜೊಡೋ ಯಾತ್ರೆಯ ಸಂದರ್ಭದಲ್ಲಿ ಆಕ್ಷೇಪಾರ್ಹ ಹೇಳಿಕೆಯನ್ನು ನೀಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ನೀಡಿದ್ದ ಸಮನ್ಸ್ ರದ್ದುಪಡಿಸಲು ಕೋರಿ ಕಾಂಗ್ರೆಸ್ ನಾಯಕ ರಾಹುಲ್ಗಾಂಧಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಪೀಠ ಇದೇ ವೇಳೆ ತಿರಸ್ಕರಿಸಿದೆ.

ಲಖನೌ ಪೀಠದ, ನ್ಯಾಯಮೂರ್ತಿ ಸುಭಾಷ್ ವಿದ್ಯಾರ್ಥಿ ಅವರಿದ್ದ ಪೀಠ ಈ ಕುರಿತು ಮೇ 29ರಂದು ಆದೇಶ ನೀಡಿದೆ. ಭಾರತೀಯ ಸೇನೆ ವಿರುದ್ಧ ರಾಹುಲ್ಗಾಂಧಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂಬುದು ಮೇಲ್ನೊಟಕ್ಕೆ ಕಂಡುಬರುತ್ತಿದೆ ಎಂದು ಹೇಳಿತು.

ಈ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿ ಕೆಳಹಂತದ ಕೋರ್ಟ್ ಫೆಬ್ರುವರಿ ತಿಂಗಳಲ್ಲಿ ನೀಡಿದ್ದ ಆದೇಶವನ್ನು ಪೀಠವು ಎತ್ತಿಹಿಡಿಯಿತು.

ಸಂವಿಧಾನದ ವಿಧಿ 19 (1)(ಎ) ಅಭಿವ್ಯಕ್ತಿ ಸ್ವಾತಂತ್ರ್ಯ ನೀಡಲಿದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಅದರರ್ಥ ಯಾವುದೇ ವ್ಯಕ್ತಿ, ಸೇನೆ ವಿರುದ್ಧ ಆಕ್ಷೇಪಾರ್ಹ ಹೇಳಿಕೆಯನ್ನು ನೀಡಬಹುದು ಎಂಬುದಲ್ಲ ಎಂದು ನ್ಯಾಯಮೂರ್ತಿ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

ಗಡಿ ರಸ್ತೆ ಸಂಘಟನೆಯ ನಿವೃತ್ತ ನಿರ್ದೇಶಕ (ಸೇನೆಯ ಕರ್ನಲ್ ಹುದ್ದೆಗೆ ಸಮಾನ) ಉದಯ್ ಶಂಕರ್ ಶ್ರೀವಾತ್ಸವ ಈ ಬಗ್ಗೆ ದೂರು ದಾಖಲಿಸಿದ್ದರು. ಅರುಣಾಚಲದಲ್ಲಿ ಭಾರತ –ಚೀನಾ ಸೇನೆ ನಡುವೆ ನಡೆದಿದ್ದ ಸಂಘರ್ಷ ಕುರಿತು ರಾಹುಲ್ ಗಾಂಧಿ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದಾರೆ ಎಂದಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.