ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖರ್ಗೆ ಕರ್ನಾಟಕ ಬಿಡದಿದ್ದರೆ BJP ಸೇರುತ್ತೇನೆ ಎಂದಿದ್ದರು ಸಿದ್ದರಾಮಯ್ಯ: HDK

Published 17 ಏಪ್ರಿಲ್ 2024, 13:46 IST
Last Updated 17 ಏಪ್ರಿಲ್ 2024, 13:46 IST
ಅಕ್ಷರ ಗಾತ್ರ

‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರ್ನಾಟಕ ಖಾಲಿ ಮಾಡದೇ ಇದ್ದರೆ ಬಿಜೆಪಿ ಸೇರುತ್ತೇನೆ ಎಂದು ಸಿದ್ದರಾಮಯ್ಯ ಅವರು ಕಾಂಗ್ರೆಸ್ ಹೈಕಮಾಂಡ್‌ ಅನ್ನು ಬೆದರಿಸಿದ್ದರು’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು. ಮೈಸೂರಿನಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಬೇರೆ ಸಮಾಜದ ನಾಯಕರ ಏಳಿಗೆಯನ್ನು ಸಿದ್ದರಾಮಯ್ಯ ಎಂದಿಗೂ ಸಹಿಸಿಲ್ಲ; ಸಹಿಸುವುದೂ ಇಲ್ಲ’ ಎಂದು ದೂರಿದರು. ‘ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ನಡೆಯುತ್ತಿರುವ ಬೆಳವಣಿಗೆ ಹಾಗೂ ಬದಲಾವಣೆ ನೋಡಿದ ಮೇಲೆ ಡಿ.ಕೆ. ಶಿವಕುಮಾರ್ ಭಾಷೆಯಲ್ಲಿ ಬದಲಾವಣೆ ಆಗುತ್ತಿದೆ. ಕಾಂಗ್ರೆಸ್‌ಗೆ ಈಗ ಕುಮಾರಸ್ವಾಮಿಯೇ ಗುರಿ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT