ನವದೆಹಲಿ: ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ದೆಹಲಿಯ ಏಮ್ಸ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಮನಮೋಹನ್ ಸಿಂಗ್ ಶೀಘ್ರವೇ ಗುಣಮುಖರಾಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಹಾರೈಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, 'ಡಾ. ಮನಮೋಹನ್ ಸಿಂಗ್ ಅವರ ಉತ್ತಮ ಆರೋಗ್ಯ ಹಾಗೂ ಶೀಘ್ರ ಗುಣಮುಖರಾಗಲು ಪ್ರಾರ್ಥಿಸುತ್ತೇನೆ' ಎಂದು ಹೇಳಿದ್ದಾರೆ.

ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವಿಯ, ದೆಹಲಿಯ ಏಮ್ಸ್ ಆಸ್ಪತ್ರೆಗೆ ತೆರಳಿ ಮನಮನೋಹನ್ ಸಿಂಗ್ ಅವರನ್ನು ಭೇಟಿಯಾಗಿ ಆರೋಗ್ಯವನ್ನು ವಿಚಾರಿಸಿದ್ದಾರೆ.

89 ವರ್ಷದ ಮನಮೋಹನ್ ಸಿಂಗ್ ಸೋಮವಾರದಿಂದ ಜ್ವರದಿಂದ ಬಳಲಿದ್ದರು. ಬಳಿಕ ಚೇತರಿಸಿಕೊಂಡರೂ ನಿಶಕ್ತಿ ಕಾಡಿತ್ತು. ಇದರಿಂದಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ದ್ರವ ರೂಪದ ಆಹಾರವನ್ನಷ್ಟೇ ಸೇವಿಸುತ್ತಿದ್ದಾರೆ.

ಏಮ್ಸ್ನ ಕಾರ್ಡಿಯೊ ನ್ಯೂರೊ ಘಟಕದ ಖಾಸಗಿ ವಾರ್ಡ್ನಲ್ಲಿ ಮನಮೋಹನ್ ಅವರನ್ನು ದಾಖಲಿಸಲಾಗಿದ್ದು, ಡಾ. ನಿತೀಶ್ ನಾಯಕ್ ನೇತೃತ್ವದ ಹೃದ್ರೋಗ ತಜ್ಞರ ತಂಡವು ನಿಗಾ ವಹಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.