ಗುರುಗ್ರಾಮ: ಇತ್ತೀಚೆಗೆ ಕೋವಿಡ್ ಲಸಿಕೆ ಪಡೆದಿದ್ದ ಹರಿಯಾಣದ ಗುರುಗ್ರಾಮದ ಮಹಿಳಾ ಆರೋಗ್ಯ ಕಾರ್ಯಕರ್ತೆಯೊಬ್ಬರು ಶುಕ್ರವಾರ ಮೃತಪಟ್ಟಿದ್ದಾರೆ. ಆದರೆ ಸಾವಿಗೂ, ಲಸಿಕೆಗೂ ಯಾವುದೇ ಸಂಬಂಧವಿಲ್ಲ ಎಂದು ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

55 ವರ್ಷದ ಮಹಿಳೆ ಗುರುಗ್ರಾಮದ ತಮ್ಮ ಮನೆಯಲ್ಲಿ ನಿಧನರಾಗಿದ್ದಾರೆ.

'ಜನವರಿ 16 ರಂದು ಮಹಿಳೆಗೆ ಕೋವಿಡ್ ಲಸಿಕೆ ನೀಡಲಾಗಿತ್ತು. ಇಂದು ಅವರು ತಮ್ಮ ಮನೆಯಲ್ಲಿ ಹಠಾತ್ ಸಾವಿಗೀಡಾಗಿದ್ದಾಗಿ ಅವರ ಕುಟುಂಬಸ್ಥರು ತಿಳಿಸಿದ್ದಾರೆ. ಆದರೆ ಲಸಿಕೆಗೂ, ಸಾವಿಗೂ ಯಾವುದೇ ಸಂಬಂಧ ಇಲ್ಲ,' ಎಂದು ಗುರುಗ್ರಾಮದ ಮುಖ್ಯ ವೈದ್ಯಾಧಿಕಾರಿ ವೀರೇಂದ್ರ ಯಾದವ್ ದೂರವಾಣಿ ಮೂಲಕ ತಿಳಿಸಿದ್ದಾರೆ.

'ಆದರೂ, ಮಹಿಳೆಯ ದೇಹದ ಒಳಾಂಗಗಳ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಿದ್ದೇವೆ. ವರದಿ ಬಂದ ನಂತರ ವಿವರಗಳು ತಿಳಿಯುತ್ತವೆ' ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.