ಶಾಹ್‌ಡೋಲ್: 17 ವರ್ಷದ ಮೂಗ ಯುವತಿಯ ಮೇಲೆ ನೆರೆಯಮನೆಯ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ ಘಟನೆ ಮಧ್ಯಪ್ರದೇಶದ ಶಾಹ್‌ಡೋಲ್ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಸಂತ್ರಸ್ತೆಯ ತಾಯಿ ನೀಡಿದ ದೂರಿನ ಅನ್ವಯ, 45 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಂಜುಲತಾ ಪಾಟ್ಲೆ ಮಾಹಿತಿ ನೀಡಿದ್ದಾರೆ.
.ಅಲೀಗಢ: 10ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ.
ಕೆಲ ದಿನಗಳಿಂದ ಸಂತ್ರಸ್ತೆಯ ತಾಯಿ ಇಲ್ಲದ್ದನ್ನು ಅರಿತುಕೊಂಡಿದ್ದ ಆರೋಪಿ, ಮನೆಗೆ ನುಗ್ಗಿ ಅತ್ಯಾಚಾರ ಎಸಗಿದ್ದ. ಮಗಳ ನಡವಳಿಕೆಯಲ್ಲಿ ಬದಲಾವಣೆಯನ್ನು ಕಂಡ ತಾಯಿ, ಆಕೆಯನ್ನು ವಿಚಾರಿಸಿದಾಗ ಅತ್ಯಾಚಾರ ಎಸಗಿದ್ದು ಗೊತ್ತಾಯಿತು ಎಂದು ಕೊತ್ವಾಲಿ ಪೊಲೀಸ್ ಠಾಣೆಯ ಉಸ್ತುವಾರಿ ರಾಘವೇಂದ್ರ ಸಿಂಗ್ ಹೇಳಿದ್ದಾರೆ.

ಭಾರತೀಯ ದಂಡ ಸಂಹಿತೆ ಹಾಗೂ ಪೋಕ್ಸೊ ಕಾಯ್ದೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
.ಜಾರ್ಖಂಡ್ | ಅತ್ಯಾಚಾರ: ಹಿರಿಯ ಅಧಿಕಾರಿಗಳ ಕಾರು ಚಾಲಕರ ಬಂಧನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.