ನವದೆಹಲಿ: ಪೂರ್ವ ದೆಹಲಿಯ ವಿವೇಕ್ ವಿಹಾರ್ ಪ್ರದೇಶದಲ್ಲಿರುವ ‘ಬೇಬಿ ಕೇರ್ ನ್ಯೂಬಾರ್ನ್’ ಆಸ್ಪತ್ರೆಯಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಏಳು ನವಜಾತ ಶಿಶುಗಳು ಮೃತಪಟ್ಟಿವೆ. ಪ್ರಕರಣ ಕುರಿತಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ.

ಅಗ್ನಿ ಅವಘಡದಲ್ಲಿ ತಮ್ಮ ಮಕ್ಕಳನ್ನು ಕಳೆದುಕೊಂಡ ಪೋಷಕರಿಗೆ ಅವರು ಸಾಂತ್ವನ ಹೇಳಿದ್ಧಾರೆ.

‘ದೆಹಲಿಯ ಬೇಬಿ ಕೇರ್ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಹಲವು ನವಜಾತ ಶಿಶುಗಳು ಸಾವಿಗೀಡಾಗಿರುವುದು ಹೃದಯ ವಿದ್ರಾವಕ. ಎಲ್ಲ ದುಃಖತಪ್ತ ಪೋಷಕರು ಮತ್ತು ಸಂಬಂಧಿಕರಿಗೆ ನನ್ನ ಸಂತಾಪಗಳು. ಗಾಯಗೊಂಡ ಮಕ್ಕಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ’ ಎಂದಿದ್ದಾರೆ.

ಶನಿವಾರ ರಾತ್ರಿ 11.30ರ ಸುಮಾರಿಗೆ ಬೇಬಿ ಕೇರ್ ನ್ಯೂಬಾರ್ನ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬಳಿಕ, ಪಕ್ಕದ ಕಟ್ಟಡಗಳಿಗೂ ಬೆಂಕಿ ವ್ಯಾಪಿಸಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆಯ ಅಧಿಕಾರಿಗಳು ತಿಳಿಸಿದ್ದಾರೆ.

16 ಅಗ್ನಿಶಾಮಕ ದಳಗಳು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿವೆ ಎಂದು ವಿಭಾಗೀಯ ಅಗ್ನಿಶಾಮಕ ಅಧಿಕಾರಿ ರಾಜೇಂದ್ರ ಅತ್ವಾಲ್ ಹೇಳಿದ್ದಾರೆ.

2ನೇ ಅಂತಸ್ತಿನಲ್ಲಿದ್ದ ಆಕ್ಸಿಜನ್ ಸಿಲಿಂಡರ್ಗಳು ಸ್ಫೋಟಗೊಂಡಿದ್ದರಿಂದ ಪಕ್ಕದ ಕಟ್ಟಡಗಳಿಗೂ ಹಾನಿಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.