ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಸಿಗಾಳಿ ಅಬ್ಬರ: ತ್ರಿಪುರಾದಲ್ಲಿ 4 ದಿನ ಶಾಲೆಗಳಿಗೆ ರಜೆ ಘೋಷಣೆ

Published 24 ಏಪ್ರಿಲ್ 2024, 10:50 IST
Last Updated 24 ಏಪ್ರಿಲ್ 2024, 10:50 IST
ಅಕ್ಷರ ಗಾತ್ರ

ಅಗರ್ತಲಾ: ದೇಶದಾದ್ಯಂತ ಬಿಸಿಗಾಳಿಯ ಹೊಡೆತಕ್ಕೆ ಜನ ತತ್ತರಿಸಿದ್ದಾರೆ. ತ್ರಿಪುರಾದಲ್ಲಿ ಸರಾಸರಿ ತಾಪಮಾನ 37 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದ್ದು, ಏ.24ರಿಂದ 27ರವರೆಗೆ ರಾಜ್ಯದ ಎಲ್ಲಾ ಶಾಲೆಗಳನ್ನು ಬಂದ್ ಮಾಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ವಾರದ ಅಂತ್ಯದ ಹೊತ್ತಿಗೆ ತಾಪಮಾನ 39 ಡಿಗ್ರಿ ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳಿಗೆ ತಿಳಿಸಿದ್ದಾರೆ.

ರಾಜ್ಯದಲ್ಲಿ ಬಿಸಿಗಾಳಿ ಮತ್ತು ಆರ್ದ್ರತೆ ಪರಿಸ್ಥಿತಿ ಇನ್ನೂ ಕೆಲವು ದಿನಗಳ ಕಾಲ ಮುಂದುವರಿಯಲಿದೆ. ಹೀಗಾಗಿ ರಾಜ್ಯ ಸರ್ಕಾರ, ಇದು ‘ರಾಜ್ಯದ ನಿರ್ದಿಷ್ಟ ವಿಪತ್ತಿನ ಸಮಯ’ ಎಂದು ಘೋಷಿಸಿದೆ. ಎಲ್ಲಾ ಜಿಲ್ಲೆಗಳಲ್ಲಿ ಬಿಸಿಗಾಳಿಯ ಬಗ್ಗೆ ಜಾಗೃತಿ ಮೂಡಿಸಲು ಸೂಚಿಸಲಾಗಿದೆ ಎಂದು ಶಿಕ್ಷಣ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಎನ್‌.ಸಿ. ಶರ್ಮಾ ಹೇಳಿದ್ದಾರೆ. 

ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಅನಗತ್ಯವಾಗಿ ಮನೆಯಿಂದ ಹೊರೆಗೆ ಬರುವುದನ್ನು ತಪ್ಪಿಸಿ ಎಂದು ಜನರಿಗೆ ಸಲಹೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT