ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದಲ್ಲಿ ಬಿಸಿಗಾಳಿ ಅಂತ್ಯಗೊಳ್ಳುತ್ತಿದೆ: ಹವಾಮಾನ ಇಲಾಖೆ

Published 9 ಮೇ 2024, 12:15 IST
Last Updated 9 ಮೇ 2024, 12:15 IST
ಅಕ್ಷರ ಗಾತ್ರ

ನವದೆಹಲಿ: ರಾಜಸ್ಥಾನದ ಪಶ್ಚಿಮ ಭಾಗ ಮತ್ತು ಕೇರಳ ಹೊರತುಪಡಿಸಿ ದೇಶದಲ್ಲಿ ಬಿಸಿಗಾಳಿ ಅಂತ್ಯಗೊಳ್ಳುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ವಿಜ್ಞಾನಿ ಸೋಮಾ ಸೇನ್‌ ತಿಳಿಸಿದ್ದಾರೆ.

ನಾಳೆ (ಮೇ 10) ರಾಜಸ್ಥಾನದ ಪಶ್ಚಿಮ ಭಾಗದಲ್ಲಿ ಮಾತ್ರ ಬಿಸಿಗಾಳಿ ಇರಲಿದೆ. ಹೀಗಾಗಿ ಅಲ್ಲಿ ಯೆಲ್ಲೊ ಅಲರ್ಟ್‌ ಘೋಷಣೆ ಮಾಡಲಾಗಿದೆ. ಬಂಗಾಳಕೊಲ್ಲಿಯಿಂದ ದೇಶದೊಳಗೆ ತೇವಾಂಶಭರಿತ ಗಾಳಿ ಬೀಸಲಿದ್ದು, ದೇಶದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಅವರು ಮಾಹಿತಿ ನೀಡಿದ್ದಾರೆ. 

ಬಿಸಿಗಾಳಿ ಇರುವ ಕಡೆ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಗುಡ್ಡಗಾಡು ಪ್ರದೇಶದಲ್ಲಿ 30 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಬಿಸಿಗಾಳಿ ಎನ್ನುವುದು ಗಾಳಿಯ ಉಷ್ಣತೆಯ ಸ್ಥಿತಿಯಾಗಿದ್ದು ಅದು ಉಂಟಾದಾಗ ಮಾನವನ ದೇಹಕ್ಕೆ ಮಾರಕವಾಗುತ್ತದೆ ಎಂದು ಐಎಂಡಿ ಹೇಳಿದೆ.

ಕಳೆದ ಕೆಲವು ತಿಂಗಳುಗಳಿಂದ ದೇಶದಲ್ಲಿ ಬಿಸಿಗಾಳಿ, ತಾಪಮಾನದ ಏರಿಕೆಯಿಂದಾಗಿ ಜನರು ತತ್ತರಿಸಿದ್ದರು.ಹಲವು ರಾಜ್ಯಗಳಲ್ಲಿ ಬರ ಜನರನ್ನು ಹೈರಾಣಗೊಳಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT