ಶಿಮ್ಲಾ(ಹಿಮಾಚಲ ಪ್ರದೇಶ): ಭಾನುವಾರ ಇಡೀ ದಿನ ಸುರಿದ ಭಾರಿ ಮಳೆಗೆ ಹಿಮಾಚಲ ಪ್ರದೇಶದಲ್ಲಿ ಹಠಾತ್ ಪ್ರವಾಹ ಉಂಟಾಗಿದ್ದು, ಅಲ್ಲಲ್ಲಿ ಭೂಕುಸಿತ ಸಂಭವಿಸಿದೆ. ಮಳೆಗೆ ನಾಲ್ಕು ಹೆದ್ದಾರಿಗಳು ಸೇರಿದಂತೆ 338 ರಸ್ತೆಗಳು ಜಲಾವೃತವಾಗಿ ಸಂಚಾರ ಸ್ಥಗಿತಗೊಂಡಿದೆ.

‘ಶಿಮ್ಲಾ ಜಿಲ್ಲೆಯಲ್ಲಿ 104 ರಸ್ತೆಗಳು, ಮಂಡಿಯಲ್ಲಿ 71, ಸಿರ್ಮೌರ್ 58, ಚಂಬಾದಲ್ಲಿ 55, ಕುಲ್ಲು ಜಿಲ್ಲೆಯಲ್ಲಿ 26, ಸೋಲಾನ್, ಲಾಹೌಲ್ ಮತ್ತು ಸ್ಪಿತಿಯಲ್ಲಿ ತಲಾ 7, ಕಿನ್ನೌರದಲ್ಲಿ 5, ಬಿಲಾಸ್‌ಪುರ್‌ನಲ್ಲಿ 1 ಹಾಗೂ ಕಾಂಗ್ರಾ ಜಿಲ್ಲೆಯ 4 ರಸ್ತೆಗಳಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ’ ಎಂದು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ ತಿಳಿಸಿದೆ.

‘ಜೂನ್ 27ರಿಂದ ಆಗಸ್ಟ್ 9 ರವರೆಗೆ ಮಳೆ ಸಂಬಂಧಿತ ಅವಘಡಗಳಲ್ಲಿ ಸುಮಾರು 100 ಜನ ಮೃತಪಟ್ಟಿದ್ದು, ಅಂದಾಜು ₹842 ಕೋಟಿ ನಷ್ಟವಾಗಿದೆ’ ಎಂದು ಅಧಿಕಾರಿಗಳು ತಿಳಿಸಿದರು.

‘ನಿನ್ನೆ ಮಳೆಗೆ ಚಂಬಾ, ಮಂಡಿ, ಕಿನ್ನೌರ್, ಶಿಮ್ಲಾ, ಸಿರ್ಮೌರ್ ಮತ್ತು ಸೋಲನ್ ಜಿಲ್ಲೆಗಳಲ್ಲಿ ಭೂಕುಸಿತ ಮತ್ತು ಹಠಾತ್ ಪ್ರವಾಹ ವರದಿಯಾಗಿದೆ’ ಎಂದು ಅವರು ಹೇಳಿದರು.

ಶನಿವಾರದವರೆಗೆ ರಾಜ್ಯದ ಕೆಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಿ ಪ್ರಾದೇಶಿಕ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಚಂಬಾ, ಕಿನ್ನೌರ್, ಸಿರ್ಮೌರ್ ಮತ್ತು ಶಿಮ್ಲಾ ಜಿಲ್ಲೆಗಳಲ್ಲಿ ಹಠಾತ್ ಪ್ರವಾಹ ಸಂಭವಿಸುವ ಸಾಧ್ಯತೆಯ ಬಗ್ಗೆಯೂ ಎಚ್ಚರಿಕೆ ನೀಡಿದೆ.

28 ಮೃತದೇಹ ಪತ್ತೆ

ಕುಲ್ಲು, ಮಂಡಿ ಮತ್ತು ಶಿಮ್ಲಾ ಜಿಲ್ಲೆಗಳಲ್ಲಿ ಜುಲೈ 31ರಂದು ಸಂಭವಿಸಿದ ಹಠಾತ್ ಪ್ರವಾಹದಲ್ಲಿ ಸುಮಾರು 30 ಜನರು ನಾಪತ್ತೆಯಾಗಿದ್ದು, ಅವರ ಪತ್ತೆಗಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಇಲ್ಲಿಯವರೆಗೆ 28 ಜನರ ಮೃತದೇಹ ಪತ್ತೆಯಾಗಿವೆ ಎಂದು ಅಧಿಕಾರಿಗಳು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.