ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳದಲ್ಲಿ ಭಾರಿ ಮಳೆ: ತಿರುವನಂತಪುರದಲ್ಲಿ ಪ್ರವಾಹ ಸ್ಥಿತಿ, ಶಾಲೆಗಳಿಗೆ ರಜೆ

Published 16 ಅಕ್ಟೋಬರ್ 2023, 4:26 IST
Last Updated 16 ಅಕ್ಟೋಬರ್ 2023, 4:26 IST
ಅಕ್ಷರ ಗಾತ್ರ

ತಿರುವನಂತಪುರ: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕೇರಳದ ಹಲವು ಭಾಗಗಳಲ್ಲಿ ಪ್ರವಾಹ ಸ್ಥಿತಿ ಎದುರಾಗಿದ್ದು, ತಿರುವನಂತಪುರದಲ್ಲಿ ಶಾಲಾ ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ. 

ಮಳೆಯಿಂದಾಗಿ ನೂರಾರು ಮನೆಗಳಿಗೆ ನೀರು ನುಗ್ಗಿದ್ದು, ಕೆಲವೆಡೆ ಭೂಕುಸಿತವೂ ಸಂಭವಿಸಿದೆ ಎಂದು ವರದಿ ತಿಳಿಸಿದೆ. ನೀರು ನುಗ್ಗಿದ ಮನೆಗಳಿಂದ ಜನರನ್ನು ರಕ್ಷಣಾ ಸಿಬ್ಬಂದಿ ದೋಣಿಯ ಮೂಲಕ ಶಿಬಿರಗಳಿಗೆ ಸ್ಥಳಾಂತರಿಸಿದ್ದಾರೆ.

ಈ ನಡುವೆ, ಕೇಂದ್ರ ಜಲ ಆಯೋಗವು ತಿರುವನಂತಪುರಂ ಜಿಲ್ಲೆಯ ಕರಮಾನ, ನೆಯ್ಯರ್ ಮತ್ತು ವಾಮನಪುರ ನದಿಗಳಲ್ಲಿ ನೀರಿನ ಪ್ರಮಾಣ ಹೆಚ್ಚುವ ಸಾಧ್ಯತೆ ಇದೆ ಎಂದು ಪ್ರವಾಹದ ಎಚ್ಚರಿಕೆ ನೀಡಿದೆ.

ತಿರುವನಂತಪುರ, ಕೊಲ್ಲಂ, ಪತ್ತನಂತಿಟ್ಟ ಮತ್ತು ಆಲಪ್ಪುಳ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಭಾನುವಾರ ಆರೆಂಜ್ ಅಲರ್ಟ್ ಘೋಷಿಸಿದ್ದು, ರಾಜ್ಯದ ಎಂಟು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT