ತಿರುವನಂತಪುರ: ಕೇರಳದ ಹಲವು ಭಾಗಗಳಲ್ಲಿ ಮಂಗಳವಾರ ಗುಡುಗು ಸಹಿತ ಭಾರಿ ಮಳೆಯಾಗಿದೆ.
ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಪತ್ತನಂತಿಟ್ಟ ಮತ್ತು ಇಡುಕ್ಕಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.
ಬುಧವಾರ ಎರ್ನಾಕುಲಂ ಮತ್ತು ತ್ರಿಶೂರ್‌ನಲ್ಲಿ, ಗುರುವಾರ ಇಡುಕ್ಕಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.
ಇಂದು ತಿರುವನಂತಪುರ, ಕೊಲ್ಲಂ ಮತ್ತು ಪತ್ತನಂತಿಟ್ಟ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಹಾಗೂ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಪ್ರದೇಶಗಳಲ್ಲಿ ವಾಸಿಸುವ ಜನರು ಹೆಚ್ಚು ಜಾಗರೂಕರಾಗಿ ಇರಬೇಕು ಎಂದು ಅಧಿಕಾರಿಗಳು ಸೂಚನೆ ನೀಡಿದ್ದಾರೆ.