ತಿರುವನಂತಪುರ: ಕೇರಳದ ವಿವಿಧೆಡೆ ಭಾರಿ ಮಳೆಯಾಗುತ್ತಿದ್ದು, ನಾಲ್ಕು ಜಿಲ್ಲೆಗಳಲ್ಲಿ ಭಾನುವಾರ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕೇರಳದ ಕೋಯಿಕ್ಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆಯು (ಐಎಂಡಿ) ಆರೆಂಜ್ ಅಲರ್ಟ್ ಘೋಷಿಸಿದೆ. ತಿರುವನಂತಪುರ ಮತ್ತು ಕೊಲ್ಲಂ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.
ಮುಂದಿನ ಐದು ದಿನಗಳ ಕಾಲ ದಕ್ಷಿಣದ ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಹೇಳಿದೆ.