ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Telangana Rains:ಶಾಲಾ– ಕಾಲೇಜುಗಳಿಗೆ ರಜೆ, ಕೆಲವು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‘

Published 26 ಜುಲೈ 2023, 4:29 IST
Last Updated 26 ಜುಲೈ 2023, 4:29 IST
ಅಕ್ಷರ ಗಾತ್ರ

ಹೈದರಾಬಾದ್‌: ತೆಲಂಗಾಣದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಇಂದು ಮತ್ತು ನಾಳೆ ರಾಜ್ಯದ ಎಲ್ಲಾ ಖಾಸಗಿ ಮತ್ತು ಸರ್ಕಾರಿ ಶಾಲಾ– ಕಾಲೇಜುಗಳಿಗೆ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ರಜೆ ಘೋಷಿಸಿದ್ದಾರೆ.

ಭಾರೀ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ರಸ್ತೆ ಸಂಚಾರಕ್ಕೆ ತೊಂದರೆಯಾಗಿದ್ದು, ರಾಜ್ಯದ ಕೆಲ ಭಾಗಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಕೆರೆಗಳು ಸೇರಿದಂತೆ ಇತರೆ ಜಲಮೂಲಗಳು ತುಂಬಿ ಹರಿಯುತ್ತಿವೆ. ನಿಜಾಮಾಬಾದ್ ಜಿಲ್ಲೆಯ ವೇಲ್ಪುರ್‌ನ ಮಂಡಲದಲ್ಲಿ 46 ಸೆಂ.ಮೀ ಮಳೆಯಾಗಿದ್ದು, ಎರಡು ಕೆರೆಗಳು ಒಡೆದ ಪರಿಣಾಮ ಜನವಸತಿ ಪ್ರದೇಶಗಳಿಗೆ ನೀರು ನುಗ್ಗಿದೆ. ಕೃಷಿ ಭೂಮಿಗಳು ಜಲಾವೃತಗೊಂಡಿದ್ದು, ರೈತರಿಗೆ ಅಪಾರ ನಷ್ಟ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಖಮ್ಮಂ, ನಲ್ಗೊಂಡ, ಸೂರ್ಯಪೇಟ್, ಮೆಹಬೂಬಾಬಾದ್, ಜನಾಂವ್, ಸಿದ್ದಿಪೇಟ್, ಯಾದಾದ್ರಿ, ಭುವನಗಿರಿ ಸೇರಿದಂತೆ ಹೈದರಾಬಾದ್‌ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ‘ರೆಡ್ ಅಲರ್ಟ್‘ ಘೋಷಿಸಿದೆ.

ರಾಜ್ಯದ ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಕೂಡ ಐಎಂಡಿ ಘೋಷಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT