ತಿರುವನಂತಪುರಂ: ಕೇರಳದಾದ್ಯಂತ ಸೋಮವಾರವೂ ಭಾರಿ ಮಳೆ ಮುಂದುವರಿದಿದ್ದು, ಕಾಸರಗೋಡು ಸೇರಿದಂತೆ, ಹತ್ತು ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಆರೇಂಜ್ ಅಲರ್ಟ್ ಘೋಷಿಸಿದೆ.

ಕಾಸರಗೋಡು, ಕೊಟ್ಟಾಯಂ, ಎರ್ನಾಕುಳಂ, ಇಡುಕ್ಕಿ, ತ್ರಿಶ್ಶೂರ್, ಪಾಲಕ್ಕಾಡ್, ಮಲ್ಲಪ್ಪುರಂ, ಕೊಯಿಕ್ಕೋಡ್, ವಯನಾಡ್ ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಕುಂದಾಲಾ, ಕಲ್ಲಾರಕುಟ್ಟಿ, ಮಲಂಕರಾ ಮತ್ತು ಪೊನ್ಮುಡಿ ಜಲಾಶಯಗಳಿಂದ ನೀರನ್ನು ಹೊರಗೆ ಬಿಡಲಾಗುತ್ತಿದ್ದು ಪರಿಣಾಮವಾಗಿ ಪೆರಿಯಾರ್, ಮುತಿರಪ್ಪುಳ ಮತ್ತು ಮೂವಾಟ್ಟುಪ್ಪುಳ ನದಿಗಳಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಾಗಿದೆ.

ಕಾಸರಗೋಡಿನಲ್ಲಿ ಒಬ್ಬರು ಮತ್ತು ತಿರುವನಂತಪುರದಲ್ಲಿ ಒಬ್ಬರು ಸಾವನ್ನಪ್ಪಿರುವುದು ವರದಿಯಾಗಿದೆ. ತಗ್ಗುಪ್ರದೇಶಗಳಲ್ಲಿ ನೀರು ತುಂಬಿಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.