ರಾಜಧಾನಿಯಲ್ಲಿ ಬಿಗಡಾಯಿಸಿದ ಪರಿಸ್ಥಿತಿ
ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಶಿಕ್ಷಣ ಸಚಿವ ವಿ.ಶಿವನ್‌ಕುಟ್ಟಿ ತಿರುವನಂತಪುರ ನಗರದಲ್ಲಿ ಮಳೆಯು ಅಸಾಮಾನ್ಯ ಪರಿಸ್ಥಿತಿಯನ್ನು ಸೃಷ್ಟಿಸಿದೆ. ಹಲವೆಡೆ ಜಲಾವೃತವಾಗಿರುವುದು ಮತ್ತು ಹೆಚ್ಚುತ್ತಿರುವ ಸಮುದ್ರದ ನೀರಿನಮಟ್ಟದಿಂದ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. ಪ್ರವಾಹಪೀಡಿತ ಪ್ರದೇಶದಲ್ಲಿ ಜಿಲ್ಲಾಡಳಿತವು ಸಮರೋಪಾದಿಯಲ್ಲಿ ಪರಿಹಾರ ಕಾರ್ಯ ನಡೆಸುತ್ತಿದೆ ಎಂದು ಫೇಸ್‌ಬುಕ್‌ನಲ್ಲಿ ತಿಳಿಸಿದ್ದಾರೆ. ಪ್ರವಾಹ ಪರಿಸ್ಥಿತಿ ಕುರಿತು ನಡೆದ ಸಚಿವರ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಂದಾಯ ಸಚಿವ ಕೆ.ರಾಜನ್ ತಿರುವನಂತಪುರದಲ್ಲಿ ಹಲವು ಭಾಗಗಳಲ್ಲಿ ಗಂಭೀರ ಹಾನಿ ಆಗಿದೆ. ಶನಿವಾರ ರಾತ್ರಿಯಿಂದ ರಾಜಧಾನಿಯಲ್ಲಿ 10 ಸೆಂ.ಮೀ ನಷ್ಟು ಮಳೆಯಾಗಿದೆ. ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶದಲ್ಲಿ ದುಪ್ಪಟ್ಟು ಮಳೆಯಾಗಿದೆ. ಇದು ಕೂಡ ತಗ್ಗುಪ್ರದೇಶಗಳು ಜಲಾವೃತವಾಗಿ ಪ್ರವಾಹ ಸೃಷ್ಟಿಗೆ ಕಾರಣವಾಗಿದೆ ಎಂದು ತಿಳಿಸಿದರು.