ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮುಂಬೈನಲ್ಲಿ ಭಾರಿ ಮಳೆ: ಹಲವು ವಿಮಾನಗಳ ಹಾರಾಟ ರದ್ದು

Published 8 ಜುಲೈ 2024, 9:30 IST
Last Updated 8 ಜುಲೈ 2024, 9:30 IST
ಅಕ್ಷರ ಗಾತ್ರ

ಮುಂಬೈ: ನಗರದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಕಡಿಮೆ ಗೋಚರತೆಯ ಪರಿಣಾಮ ಮುಂಬೈ ವಿಮಾನ ನಿಲ್ದಾಣಕ್ಕೆ ಆಗಮಿಸಬೇಕಿದ್ದ ಮತ್ತು ನಿರ್ಗಮಿಸಬೇಕಾದ ಸುಮಾರು 50 ವಿಮಾನಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ರದ್ದುಗೊಂಡಿರುವ ವಿಮಾನಗಳಲ್ಲಿ ಇಂಡಿಗೊ ಮತ್ತು ಏರ್‌ ಇಂಡಿಯಾ ವಿಮಾನಗಳು ಹೆಚ್ಚಿನ ಸಂಖ್ಯೆಯಲ್ಲಿವೆ. ಇಂದು ಬೆಳಿಗ್ಗೆ 11 ಗಂಟೆಯವರೆಗೆ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿತ್ತು. 42 ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ.

ಕೆಲವು ವಿಮಾನಗಳನ್ನು ಅಹಮದಾಬಾದ್, ಹೈದರಾಬಾದ್, ಇಂದೋರ್ ಸೇರಿದಂತೆ ಇತರೆ ವಿಮಾನ ನಿಲ್ದಾಣಗಳಿಗೆ ತೆರಳಲು ತಿಳಿಸಲಾಗಿತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮುಂಬೈನಲ್ಲಿ ಕಳೆದ 24 ಗಂಟೆಗಳಲ್ಲಿ ಸರಾಸರಿ 115.63 ಮಿಮೀ ಮಳೆ ದಾಖಲಾಗಿದ್ದರೆ, ಪೂರ್ವ ಮತ್ತು ಪಶ್ಚಿಮ ಮುಂಬೈ ಭಾಗಗಳಲ್ಲಿ ಕ್ರಮವಾಗಿ 168.68 ಮಿಮೀ ಮತ್ತು 165.93 ಮಿಮೀ ಮಳೆಯಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT