ಕೇರಳ: ಮಲಯಾಳ ಸಿನಿಮಾರಂಗದಲ್ಲಿ ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಆಡಳಿತಾರೂಢ ಸಿಪಿಐ (ಎಂ) ಪಕ್ಷದವರೂ ಭಾಗಿಯಾಗಿದ್ದಾರೆ. ಹೀಗಾಗಿ, ಕೇರಳ ಸರ್ಕಾರ ಸಂತ್ರಸ್ತೆಯರಿಗೆ ನ್ಯಾಯ ಒದಗಿಸಲು ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಕೇಂದ್ರ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆರೋಪಿಸಿದ್ದಾರೆ.
ಮಲಯಾಳ ಚಿತ್ರರಂಗದಲ್ಲಿ ಕಲಾವಿದೆಯರು ಎದುರಿಸುತ್ತಿರುವ ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದಂತೆ ನ್ಯಾ. ಹೇಮಾ ನೇತೃತ್ವದ ಸಮಿತಿಯು ಕಳೆದ ತಿಂಗಳು ವರದಿ ಪ್ರಕಟಿಸಿದೆ. ಇದರ ಬೆನ್ನಲ್ಲೇ, ಮಲಯಾಳ ಸಿನಿಮಾ ಕಲಾವಿದರ ಸಂಘಕ್ಕೆ (ಅಮ್ಮ) ಹಿರಿಯ ನಟ ಮೋಹನ್‌ಲಾಲ್ ಸೇರಿದಂತೆ ಹಲವರು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.
ಪಾಲಕ್ಕಾಡ್‌ನಲ್ಲಿ ನಡೆದ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರೊಂದಿಗೆ ಸಂವಾದ ನಡೆಸಿದ ನಡ್ಡಾ, ಚಿತ್ರರಂಗದ ಬೆಳವಣಿಗೆ ಕುರಿತು ಮಾತನಾಡಿದ್ದಾರೆ. 'ನ್ಯಾ. ಹೇಮಾ ಸಮಿತಿ ವರದಿಗೆ ನ್ಯಾಯ ಒದಗಿಸಲು ವಿಳಂಬ ಮಾಡುತ್ತಿರುವುದೇಕೆ? ಅವರನ್ನು (ಕೇರಳ ಸರ್ಕಾರವನ್ನು) ತಡೆಯುತ್ತಿರುವುದೇನು? ಅವರನ್ನು ಕಾಡುತ್ತಿರುವುದೇನು? ನೀವೂ ಅದರಲ್ಲಿ ಭಾಗಿಯಾಗಿದ್ದೀರಿ. ನಿಮ್ಮವರೂ ಅದರಲ್ಲಿ ಪಾಲ್ಗೊಂಡಿರುವುದರಿಂದ ಮುಚ್ಚಿಹಾಕಲು ಪ್ರಯತ್ನಿಸುತ್ತಿದ್ದೀರಿ' ಎಂದು ಚಾಟಿ ಬೀಸಿದ್ದಾರೆ.
#WATCH | Kerala: During the interaction with eminent personalities from various fields in Palakkad, Union Minister and BJP National President JP Nadda says, " Why delay in justice to Hema committee report? What is stopping them ( Kerala govt)? What is haunting you? Because you… pic.twitter.com/VYujS5wzaC
— ANI (@ANI) September 1, 2024
'ಕಮ್ಯುನಿಸ್ಟ್ ಪಕ್ಷದವರೂ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂಬುದನ್ನು ನ್ಯಾ. ಹೇಮಾ ಸಮಿತಿ ವರದಿ ಬಹಳ ಸ್ಪಷ್ಟವಾಗಿದೆ ಹೇಳಿದೆ ಎಂಬುದನ್ನು ಹೇಳಲು ಬೇಸರವಾಗುತ್ತಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಈ ಬಗ್ಗೆ ಮಾತನಾಡಬೇಕು' ಎಂದು ಒತ್ತಾಯಿಸಿದ್ದಾರೆ.
2017ರಲ್ಲಿ ನಟಿಯೊಬ್ಬರಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ನಟ ದಿಲೀಪ್ ಹೆಸರು ಕೇಳಿ ಬಂದಿತ್ತು. ಹೀಗಾಗಿ, ಸಿನಿರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳು, ಲೈಂಗಿಕ ದೌರ್ಜನ್ಯ ಮತ್ತು ಲಿಂಗ ಸಮಾನತೆ ಕುರಿತ ಅಧ್ಯಯನಕ್ಕೆ ಕೇರಳ ಸರ್ಕಾರ 2019ರಲ್ಲಿ ಸಮಿತಿ ರಚಿಸಿತ್ತು.
ವರದಿ ಬಳಿಕ ಶಾಸಕ ಎಂ.ಮುಕೇಶ್, ನಟ ಸಿದ್ದೀಕ್, ನಿರ್ದೇಶಕ ರಂಜಿತ್ ವಿರುದ್ಧ ಪ್ರಕರಣಗಳು ದಾಖಲಾಗಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.