ರಾಂಚಿ(ಜಾರ್ಖಂಡ್): ಇಂದು ಸಂಜೆ 5 ಗಂಟೆಗೆ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಸುದ್ದಿಸಂಸ್ಥೆ ಎಎನ್ಐ ವರದಿ ಮಾಡಿದೆ.

ಮುಖ್ಯಮಂತ್ರಿ ಸ್ಥಾನಕ್ಕೆ ಚಾಂಪೈ ಸೊರೇನ್ ಬುಧವಾರ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ ರಾಜ್ಯದಲ್ಲಿ ಸರ್ಕಾರ ರಚಿಸುವಂತೆ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಅವರು ಹೇಮಂತ್ ಸೊರೇನ್ ಅವರಿಗೆ ಆಹ್ವಾನ ನೀಡಿದ್ದರು ಎಂದು ಪಕ್ಷದ ನಾಯಕರೊಬ್ಬರು ತಿಳಿಸಿದ್ದಾರೆ.

ಈ ಮೊದಲು ಜುಲೈ 7ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ವರದಿಯಾಗಿತ್ತು.

ಮಿತ್ರಪಕ್ಷಗಳ ಶಾಸಕರ ನಡುವೆ ಭಿನ್ನಾಭಿಪ್ರಾಯ ಬಂದಿದ್ದರಿಂದ ಹೇಮಂತ್ ಸೊರೇನ್ ಅವರೇ ರಾಜ್ಯದ ಮುಖ್ಯಮಂತ್ರಿ ಆಗಬೇಕು ಎಂಬ ಒತ್ತಾಯಗಳು ಕೇಳಿ ಬಂದಿದ್ದವು. ಇದರಿಂದ ಚಾಂಪೈ ಸೊರೇನ್ ಬುಧವಾರ ಸಂಜೆ ರಾಜೀನಾಮೆ ಸಲ್ಲಿಸಿದ್ದರು.

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿದ್ದ ಹೇಮಂತ್ ಸೊರೇನ್ ಅವರು ಐದು ತಿಂಗಳ ಬಳಿಕ ಜೂನ್ 28ರಂದು ಜೈಲಿನಿಂದ ಬಿಡುಗಡೆಯಾಗಿದ್ದರು, ಜನವರಿ 31ರಂದು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದರು.

ಇಂದು ಮೂರನೇ ಬಾರಿಗೆ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.