ಬುಧವಾರ, 15 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾರ್ಖಂಡ್ ಮಾಜಿ ಸಿಎಂ ಹೇಮಂತ್‌ ಸೊರೇನ್‌ ಪತ್ನಿ ಕಲ್ಪನಾ ನಾಮಪತ್ರ ಸಲ್ಲಿಕೆ

Published 29 ಏಪ್ರಿಲ್ 2024, 10:10 IST
Last Updated 29 ಏಪ್ರಿಲ್ 2024, 10:10 IST
ಅಕ್ಷರ ಗಾತ್ರ

ರಾಂಚಿ: ಜೈಲಿನಲ್ಲಿರುವ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್‌ ಸೊರೇನ್‌ ಅವರ ಪತ್ನಿ ಕಲ್ಪನಾ ಇಂದು ( ಸೋಮವಾರ)  ಜಾರ್ಖಂಡ್‌ ಮುಕ್ತಿ ಮೋರ್ಚಾ (ಜೆಎಂಎಂ) ಪಕ್ಷದ ಅಭ್ಯರ್ಥಿಯಾಗಿ ರಾಜ್ಯದ ಗಾಂಡೇಯ್ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ.

ಗಿರಿಡೀಹ್‌ ಜಿಲ್ಲೆಯಲ್ಲಿನ ಈ ಕ್ಷೇತ್ರದ ಶಾಸಕ ಸ್ಥಾನವು ಜೆಎಂಎಂ ಶಾಸಕ ಸರ್ಫರಾಜ್‌ ಅಹಮದ್ ಅವರ ರಾಜೀನಾಮೆಯಿಂದಾಗಿ ತೆರವಾಗಿದೆ. ಈ ಕ್ಷೇತ್ರದಲ್ಲಿ ಮೇ 20ರಂದು ಉಪ ಚುನಾವಣೆ ನಡೆಯಲಿದೆ.

ನಾಮಪತ್ರ ಸಲ್ಲಿಸುವ ವೇಳೆ ಜಾರ್ಖಂಡ್‌ ಮುಖ್ಯಮಂತ್ರಿ ಚಂಪೈ ಸೊರೇನ್ ಹಾಗೂ ಇತರರು ಜತೆಗಿದ್ದರು.

48 ವರ್ಷದ ಕಲ್ಪನಾ ಅವರು, ಎಂಟೆಕ್‌ ಮತ್ತು ಎಂಬಿಎ ಪದವಿ ಪಡೆದಿದ್ದಾರೆ.

ಜನವರಿ 31ರಂದು ಭೂ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಹೇಮಂತ್ ಸೋರೆನ್ ಅವರನ್ನು ಬಂಧಿಸಿತ್ತು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT