ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಇ.ಡಿ( ಜಾರಿ ನಿರ್ದೇಶನಾಲಯ) ಸಲ್ಲಿಸಿರುವ ದೋಷಾರೋಪ ಪಟ್ಟಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಗುರಿಯಾಗಿಸಿ ನಡೆಸಿದ ಕ್ರಮ ಎಂದು ಕಾಂಗ್ರೆಸ್ ಆರೋಪಿಸಿದೆ. ಇ.ಡಿ. ಕ್ರಮ ಖಂಡಿಸಿ ಪ್ರತಿಭಟನೆ ನಡೆಸಲು ರೂಪರೇಷೆ ಸಿದ್ಧಪಡಿಸುವ ಕುರಿತು ಶನಿವಾರ (ಏಪ್ರಿಲ್ 19) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು, ಉಸ್ತುವಾರಿಗಳು ಮತ್ತು ತನ್ನ ಮುಂಚೂಣಿ ಸಂಸ್ಥೆಗಳ ಮುಖ್ಯಸ್ಥರ ಸಭೆ ಕರೆದಿದೆ.
.ಆಳ ಅಗಲ | ‘ನ್ಯಾಷನಲ್ ಹೆರಾಲ್ಡ್’ ಪ್ರಕರಣ ಏನು, ಎತ್ತ...?.
ಶನಿವಾರ ಸಂಜೆ 4 ಗಂಟೆಗೆ ನವದೆಹಲಿಯ ಇಂದಿರಾ ಗಾಂಧಿ ಭವನದಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನಖರ್ಗೆ ಅವರ ನೇತೃತ್ವದಲ್ಲಿ ಸಭೆ ನಡೆಯಲಿದೆ. ಪ್ರತಿಭಟನೆ ಮತ್ತು ಮುಂದಿನ ಹೋರಾಟದ ಕಾರ್ಯತಂತ್ರಗಳನ್ನು ಸಭೆಯಲ್ಲಿ ನಿರ್ಧರಿಸಲಾಗುತ್ತದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
.ನ್ಯಾಷನಲ್ ಹೆರಾಲ್ಡ್ ಕೇಸ್: ರಾಹುಲ್, ಸೋನಿಯಾ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದ ED.ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ, ರಾಹುಲ್ ಗಾಂಧಿಗೆ ಇ.ಡಿ ಸಮನ್ಸ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.