ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅಸ್ಸಾಂ | ₹19 ಕೋಟಿ ಮೌಲ್ಯದ ಹೆರಾಯಿನ್‌ ವಶ: ಆರು ಮಂದಿ ಬಂಧನ

Published 28 ಜೂನ್ 2024, 7:29 IST
Last Updated 28 ಜೂನ್ 2024, 7:29 IST
ಅಕ್ಷರ ಗಾತ್ರ

ಗುವಾಹಟಿ: ಅಸ್ಸಾಂನಲ್ಲಿ ಪೊಲೀಸರು ನಡೆಸಿದ ಮೂರು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಬರೋಬ್ಬರಿ ₹19 ಕೋಟಿ ಮೌಲ್ಯದ ಹೆರಾಯಿನ್‌ ವಶಪಡಿಸಿಕೊಳ್ಳಲಾಗಿದ್ದು, 6 ಜನರನ್ನು ಬಂಧಿಸಲಾಗಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.

‘ಖಚಿತ ಮಾಹಿತಿ ಮೇರೆಗೆ ಪೊಲೀಸರು ಕಛಾರ್‌ ಜಿಲ್ಲೆಯ ದಿಘಾರ್ಖಲ್‌ ಟೋಲ್‌ಗೇಟ್‌ ಬಳಿ ವಿಶೇಷ ಕಾರ್ಯಾಚರಣೆ ಕೈಗೊಂಡು 1.88 ಕೆ.ಜಿ. ತೂಕದ ಹೆರಾಯಿನ್‌ ಅನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ವಶಪಡಿಸಿಕೊಳ್ಳಲಾದ ಹೆರಾಯಿನ್‌ಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ₹9.5 ಕೋಟಿ ಮೌಲ್ಯವಿದೆ’ ಎಂದು ಶುಕ್ರವಾರ ‘ಎಕ್ಸ್‌’ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಇದೇ ಕಛಾರ್‌ ಜಿಲ್ಲೆಯಲ್ಲಿ ನಡೆದ ಮತ್ತೊಂದು ಕಾರ್ಯಾಚರಣೆಯಲ್ಲಿ ಪೊಲೀಸರು ₹3 ಕೋಟಿ ಮೌಲ್ಯದ 561 ಗ್ರಾಂ ಹೆರಾಯಿನ್‌ ವಶಪಡಿಸಿಕೊಂಡಿದ್ದು, ಇಬ್ಬರನ್ನು ಬಂಧಿಸಿದ್ದಾರೆ. ಇನ್ನು ಕರ್ಬಿ ಅಂಗ್ಲೋನ್‌ ಜಿಲ್ಲೆಯಲ್ಲಿ ಪೊಲೀಸರು ವಾಹನ ತಪಾಸಣೆ ನಡೆಸಿ 1 ಕೆ.ಜಿ. ಹೆರಾಯಿನ್‌ ಹಾಗೂ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದಿದ್ದಾರೆ. ಈ ಎಲ್ಲ ಕಾರ್ಯಾಚರಣೆಗಳನ್ನು ನಡೆಸಿದ ಪೊಲೀಸ್‌ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಅವರು ಬರೆದುಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT