ಮಂಗಳವಾರ, 25 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಅಸ್ಸಾಂ: ₹105 ಕೋಟಿ ಮೌಲ್ಯದ ಹೆರಾಯಿನ್ ವಶ

Published 19 ಮೇ 2024, 14:13 IST
Last Updated 19 ಮೇ 2024, 14:13 IST
ಅಕ್ಷರ ಗಾತ್ರ

ಗುವಾಹಟಿ: ಅಸ್ಸಾಂನ ಕಚಾಡ್‌ ಜಿಲ್ಲೆಯಲ್ಲಿ ₹105 ಕೋಟಿ ಮೌಲ್ಯದ 10 ಕೆ.ಜಿ.ಗೂ ಅಧಿಕ ಹೆರಾಯಿನ್ ವಶಪಡಿಸಿಕೊಳ್ಳಲಾಗಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಭಾನುವಾರ ತಿಳಿಸಿದ್ದಾರೆ.

‘ಮಾದಕ ದ್ರವ್ಯ ಸಾಗಿಸುತ್ತಿದ್ದ ಡ್ರಗ್ಸ್ ಜಾಲವನ್ನು ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಭೇದಿಸಿದ್ದಾರೆ. ನೆರೆಯ ರಾಜ್ಯದಿಂದ ಇದನ್ನು ಸಾಗಿಸಲಾಗುತ್ತಿತ್ತು’ ಎಂದು ಶರ್ಮಾ ಎಕ್ಸ್‌ನಲ್ಲಿ ತಿಳಿಸಿದ್ದಾರೆ.

’ಮಾದಕ ವಸ್ತು ಕಳ್ಳಸಾಗಣೆ ವಿರುದ್ಧದ ಕಾರ್ಯಾಚರಣೆಯನ್ನು ಮುಂದುವರಿಸಲು ಮತ್ತು ಯುವಕರು ಅಂತಹ ಬಲೆಗೆ ಬೀಳದಂತೆ ನೋಡಿಕೊಳ್ಳಲು ಅಸ್ಸಾಂ ಸರ್ಕಾರ ಬದ್ಧವಾಗಿದೆ‘ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT