ಗುವಾಹಟಿ : ಅಸ್ಸಾಂನ ಗುವಾಹಟಿಯ ಹೊರವಲಯದಲ್ಲಿ ವಾಹನವೊಂದರಿಂದ ₹ 21 ಕೋಟಿ ಮೌಲ್ಯದ ಮಾದಕ ವಸ್ತುವನ್ನು ವಶಪಡಿಸಿಕೊಂಡು, ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಆರೋಪಿಗಳು ವಾಹನದಲ್ಲಿ ಮಾದಕವಸ್ತು ಸಾಗಿಸುತ್ತಿದ್ದಾರೆ ಎಂಬ ಮಾಹಿತಿಯು ಭಾನುವಾರ ರಾತ್ರಿ ಸಿಗುತ್ತಿದ್ದಂತೆ ಪೊಲೀಸರು ಕಾರ್ಯಪ್ರವೃತ್ತರಾಗಿದ್ದಾರೆ. ಜೋರ್ಹಾಟ್ ಬಳಿ ಸಾಗುತ್ತಿದ್ದ ವಾಹನದಲ್ಲಿ 198 ಸೋಪ್ ಪೆಟ್ಟಿಗೆಗಳಲ್ಲಿ ಇರಿಸಲಾಗಿದ್ದ 2.527 ಕೆ.ಜಿ ಹೆರಾಯಿನ್‌ಅನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಬಂಧಿತ ಆರೋಪಿಗಳು ಮಣಿಪುರದವರು ಎಂದು ಪೊಲೀಸರು ತಿಳಿಸಿದ್ದಾರೆ.
21 ಸೋಪ್ ಪೆಟ್ಟಿಗೆಗಳಲ್ಲಿ ಇರಿಸಲಾಗಿದ್ದ ಸುಮಾರು ₹2 ಕೋಟಿ ಮೌಲ್ಯದ ಮಾದಕ ವಸ್ತುವನ್ನು ಈಚೆಗಷ್ಟೇ ವಶಕ್ಕೆ ತೆಗೆದುಕೊಳ್ಳಲಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.