ಚೆನ್ನೈ: ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಳಿನಿ ಶ್ರೀಹರನ್ಗೆ ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗಲು ಮದ್ರಾಸ್ ಹೈಕೋರ್ಟ್ ಅನುಮತಿ ನೀಡಿದೆ.

ತನ್ನ ಮಗಳ ವಿವಾಹಕ್ಕಾಗಿ ಆರು ತಿಂಗಳ ಅವಧಿಗೆ ಸಾಮಾನ್ಯ ರಜೆ ಕೋರಿ ನಳಿನಿ ಅರ್ಜಿ ಸಲ್ಲಿಸಿದ್ದರು. ಜುಲೈ 5ರಂದು ನಡೆಯುವ ಈ ಅರ್ಜಿ ವಿಚಾರಣೆಯಲ್ಲಿ ಸ್ವತಃ ವಾದ ಮಂಡಿಸುವುದಾಗಿ ನಳಿನಿ ಮನವಿ ಮಾಡಿದ್ದರು. ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ್ ಹಾಗೂ ಎಂ.ನಿರ್ಮಲ್ ಕುಮಾರ್ ಅವರನ್ನೊಳಗೊಂಡ ವಿಭಾಗೀಯ ನ್ಯಾಯಪೀಠ, ಇದಕ್ಕೆ ಒಪ್ಪಿಗೆ ನೀಡಿದೆ.

ಜುಲೈ 5ರ ಮಧ್ಯಾಹ್ನ 2.15ರ ಒಳಗೆ ನಳಿನಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಬೇಕೆಂದು ವೆಲ್ಲೂರಿನ ಕೇಂದ್ರ ಕಾರಾಗೃಹದ ಅಧಿಕಾರಿಗಳಿಗೆ ವಿಭಾಗೀಯ ಪೀಠ ಆದೇಶಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.