ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸಿಬಿಐ ನಿರ್ದೇಶಕರ ಆಯ್ಕೆ: ಪಟ್ಟಿಯಲ್ಲಿ ಕರ್ನಾಟಕದ ಡಿಜಿ-ಐಜಿಪಿ ಪ್ರವೀಣ್ ಸೂದ್ ಹೆಸರು

Published 14 ಮೇ 2023, 5:28 IST
Last Updated 14 ಮೇ 2023, 5:28 IST
ಅಕ್ಷರ ಗಾತ್ರ

ಬೆಂಗಳೂರು: ಕೇಂದ್ರೀಯ ತನಿಖಾ ದಳದ (ಸಿಬಿಐ) ನೂತನ ನಿರ್ದೇಶಕರ ಆಯ್ಕೆಗೆ ‌ಪ್ರಕ್ರಿಯೆ ಆರಂಭವಾಗಿದ್ದು, ಮೂವರು ಅರ್ಹ ಐಪಿಎಸ್ ಅಧಿಕಾರಿಗಳ ಪಟ್ಟಿಯನ್ನು ವಿಶೇಷ ಸಮಿತಿ ಸಿದ್ಧಪಡಿಸಿ ಸಚಿವ‌ ಸಂಪುಟಕ್ಕೆ ಶಿಫಾರಸು ‌ಮಾಡಿದೆ.

ಕರ್ನಾಟಕದ ಪೊಲೀಸ್ ಮಹಾನಿರ್ದೇಶಕ (ಡಿಜಿ-ಐಜಿಪಿ) ಪ್ರವೀಣ್ ಸೂದ್, ಮಧ್ಯಪ್ರದೇಶದ ಡಿಜಿ-ಐಜಿಪಿ ಸುಧೀರ್‌ಕುಮಾರ್ ಸಕ್ಸೆನಾ ಹಾಗೂ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯ ಡಿ.ಜಿ ತಾಜ್ ಹಸನ್ ಅವರ ಹೆಸರು ಪಟ್ಟಿಯಲ್ಲಿದೆ.

ಪ್ರಧಾನಿ ನೇತೃತ್ವದಲ್ಲಿ ರಚನೆಗೊಂಡಿದ್ದ ಸಮಿತಿ ಈ ಪಟ್ಟಿ ಸಿದ್ಧಪಡಿಸಿದೆ. ಇದರಲ್ಲಿ ಒಬ್ಬರನ್ನು ಆಯ್ಕೆ ಮಾಡಲು ಪಟ್ಟಿಯನ್ನು ಸಚಿವ ಸಂಪುಟಕ್ಕೆ ಕಳುಹಿಸಲಾಗಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT