ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಮಾಚಲ ಪ್ರದೇಶ: ಅಗ್ನಿ ದುರಂತ– ಐದು ಸಾವು

Published 3 ಫೆಬ್ರುವರಿ 2024, 13:12 IST
Last Updated 3 ಫೆಬ್ರುವರಿ 2024, 13:12 IST
ಅಕ್ಷರ ಗಾತ್ರ

ಶಿಮ್ಲಾ, (ಪಿಟಿಐ): ಹಿಮಾಚಲ ಪ್ರದೇಶದ ಸೋಲನ್‌ ನಗರದ ಬಳಿಯ ಕೈಗಾರಿಕಾ ಪ್ರದೇಶದಲ್ಲಿ ಸುಗಂಧದ್ರವ್ಯ ತಯಾರಿಕಾ ಘಟಕವೊಂದರಲ್ಲಿ  ಶುಕ್ರವಾರ ಭಾರಿ ಅಗ್ನಿ ಅವಘಡ ಸಂಭವಿಸಿದೆ. ದುರಂತದಲ್ಲಿ ಮೃತಪಟ್ಟವರ ಸಂಖ್ಯೆಯು ಶನಿವಾರ 5ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

ಎನ್‌.ಆರ್‌. ಆರೋಮಾಸ್‌ ಸಂಸ್ಥೆಯ ತಯಾರಿಕಾ ಘಟಕದಲ್ಲಿ ನಡೆದ ಅವಘಡದಲ್ಲಿ 31 ಜನರು ಗಾಯಗೊಂಡಿದ್ದು, ಕಾಣೆಯಾಗಿರುವ ಒಂಬತ್ತು ಜನರಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಸೋಲನ್‌ನ ಉಪ ಆಯುಕ್ತರು ಹೇಳಿದರು.

ದಹನಕಾರಿ ವಸ್ತುಗಳನ್ನು ಸುಗಂಧದ್ರವ್ಯ ತಯಾರಿಕೆಗೆ ಬಳಸಲಾಗುತ್ತದೆ. ಹೀಗಾಗಿ ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಇನ್ನೂ ಪ್ರಯತ್ನ ನಡೆಸಿದ್ದಾರೆ ಎಂದರು.

ಸಂಸ್ಥೆಯ ಮುಖ್ಯಸ್ಥ ಚಂದ್ರಶೇಖರ್ ಅವರನ್ನು ಬಂಧಿಸಲಾಗಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 285 (ನಿರ್ಲಕ್ಷ್ಯ), 335 (ಪ್ರಣಾಪಾಯ ಉಂಟುಮಾಡುವ), 337 (ಭಾದೆ ಉಂಟುಮಾಡುವ ಮತ್ತು ಕೊಲೆಯಲ್ಲದ ಶಿಕ್ಷಾರ್ಹ ನರಹತ್ಯೆ) ಅಡಿ ಎಫ್‌ಐಆರ್‌ ದಾಖಲಿಸಲಾಗಿದೆ ಎಂದಿದ್ದಾರೆ.

ಬೆಂಕಿ ಹೊತ್ತಿಕೊಳ್ಳಲು ಕಾರಣವೇನೆಂದು ತಿಳಿದುಬಂದಿಲ್ಲ. ಮ್ಯಾಜಿಸ್ಟೆರಿಯಲ್‌ ತನಿಖೆಗೆ ಆದೇಶಿಸಲಾಗಿದೆ. ಮೃತರ ಕುಟುಂಬಗಳಿಗೆ ಮತ್ತು ಗಾಯಗೊಂಡವರಿಗೆ ಸೂಕ್ತ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT