ಶಿಮ್ಲಾ: ಕಟ್ಟಡ ಕುಸಿದ ಘಟನೆಯು ರಾಜ್ಯ ಸರ್ಕಾರದ ಹೊಣೆಗಾರಿಕೆ ಎಂದು ಮನವರಿಕೆ ಮಾಡಿದ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಹೆಚ್ಎಐ)ದ ಇಬ್ಬರು ಅಧಿಕಾರಿಗಳ ಮೇಲೆ ಹಿಮಾಚಲ ಪ್ರದೇಶದ ಸಚಿವ ಅನಿರುದ್ಧ್ ಸಿಂಗ್ ಹಲ್ಲೆ ನಡೆಸಿದ್ದಾರೆ ಎಂದು ಮಂಗಳವಾರ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ ಬೆಳಿಗ್ಗೆ ರಾಜ್ಯದ ಚಾಮಿಯಾನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಹೋಗುವ ರಸ್ತೆಯಲ್ಲಿರುವ ಭಟ್ಟಾಕುಫರ್ನ ಮಾಥು ಕಾಲೋನಿಯಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿದಿತ್ತು. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಭಟ್ಟಾಕುಫರ್ ಅನಿರುದ್ಧ್ ಅವರು ಪ್ರತಿನಿಧಿಸುವ ಕಸುಂಪ್ತಿ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ.

ಘಟನೆ ನಂತರ ತಮ್ಮ ಬೆಂಬಲಿಗರೊಂದಿಗೆ ಸ್ಥಳಕ್ಕೆ ಬಂದ ಸಚಿವರು, ಎನ್ಹೆಚ್ಎಐ ಅಧಿಕಾರಿಗಳನ್ನು ಕರೆಸಿಕೊಂಡಿದ್ದರು. ಈ ವೇಳೆ ಎನ್ಎಚ್ಎಐ ಯೋಜನಾ ವ್ಯವಸ್ಥಾಪಕ ಜಿಂದಾಲ್ ಮತ್ತು ಅವರ ಸೈಟ್ ಎಂಜಿನಿಯರ್ ಯೋಗೇಶ್ ಅವರು ಸ್ಥಳಕ್ಕೆ ತಲುಪಿ ರಾಷ್ಟ್ರೀಯ ಹೆದ್ದಾರಿಯಿಂದ 30 ಮೀಟರ್ ದೂರದಲ್ಲಿ ಕುಸಿತ ಸಂಭವಿಸಿರುವ ಬಗ್ಗೆ ಸಚಿವರಿಗೆ ವಿವರಿಸಿದ್ದರು. ಹೆದ್ದಾರಿಯ ಹೊರಗೆ ಕಟ್ಟಡ ಕುಸಿತ ಸಂಭವಿಸಿರುವ ಪ್ರದೇಶ ಹಿಮಾಚಲ ಪ್ರದೇಶ ಸರ್ಕಾರದ ವ್ಯಾಪ್ತಿಗೆ ಬರುತ್ತದೆ ಎಂದು ಸಚಿವರಿಗೆ ಮಾಹಿತಿ ನೀಡಿದ್ದರು ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ.

ಇಬ್ಬರೂ ಸಿಬ್ಬಂದಿ ಆಸ್ಪತ್ರೆಗೆ ದಾಖಲಾಗಿದ್ದು, ‘ಸಚಿವ ಅನಿರುದ್ಧ್ ಸಿಂಗ್ ಹೋಟೆಲ್ ಕೋಣೆಗೆ ನಮ್ಮನ್ನು ಕರೆಸಿಕೊಂಡು ಹಲ್ಲೆ ನಡೆಸಿದ್ದಾರೆ’ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.