ನವದೆಹಲಿ: ಉತ್ತರ ಭಾರತ ಸೇರಿದಂತೆ ಹಿಮಾಚಲ ಪ್ರದೇಶದ ಹಲವೆಡೆ ಮಳೆಯ ಅಬ್ಬರ ಜೋರಾಗಿದ್ದು, ಕುಲ್ಲುವಿನಲ್ಲಿ ಬಿಯಾಸ್ ನದಿ ಉಕ್ಕಿ ಹರಿಯುತ್ತಿದೆ.

ಭಾರಿ ಮಳೆಯಿಂದಾಗಿ ನದಿಗಳು, ಕೆರೆಕಟ್ಟೆಗಳು ಉಕ್ಕಿ ಹರಿಯುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಈ ವಿಡಿಯೊ ಸುದ್ದಿಸಂಸ್ಥೆ ‘ಎಎನ್‌ಐ’ ಟ್ವಿಟರ್‌ನಲ್ಲಿ ಹಂಚಿಕೊಂಡಿದೆ. ಪ್ರವಾಹದಿಂದ ಮಳೆ ನೀರು ರಭಸವಾಗಿ ಹರಿಯುತ್ತಿರುವ ದೃಶ್ಯಗಳು ವಿಡಿಯೊದಲ್ಲಿ ಸೆರೆಯಾಗಿವೆ.

ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ ಇಂದು ಕೂಡ ಮಳೆ ಮುಂದುವರಿದಿದ್ದು, ಗುಟ್ಕರ್, ಪಾಂಡೋಹ್ ಪ್ರದೇಶದಲ್ಲಿ ಹೆಚ್ಚು ಮಳೆಯಾಗುತ್ತಿದೆ.

ಹಿಮಾಚಲ ಪ್ರದೇಶದಲ್ಲಿ ಜುಲೈನಲ್ಲಿ ಮಳೆ ಸಂಬಂಧಿತ ಅವಘಡಗಳಲ್ಲಿ 60ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದರು.

ಭೂಕುಸಿತ: ಹೆದ್ದಾರಿಗಳು ಬಂದ್

ದಿಢೀರ್ ಪ್ರವಾಹ ಮತ್ತು ಭೂಕುಸಿತದ ಪರಿಣಾಮ 5 ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್ ಮಾಡಲಾಗಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.