ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಮಾಚಲ ಪ್ರದೇಶ: ಏಪ್ರಿಲ್‌ 1ರಿಂದ ಹಳೆ ಪಿಂಚಣಿ ಯೋಜನೆ ಜಾರಿ

Last Updated 4 ಮಾರ್ಚ್ 2023, 14:19 IST
ಅಕ್ಷರ ಗಾತ್ರ

ಶಿಮ್ಲಾ (ಪಿಟಿಐ): ರಾಜ್ಯ ಸರ್ಕಾರಿ ನೌಕರರಿಗೆ ಏಪ್ರಿಲ್‌ 1ರಿಂದ ಹಳೆ ಪಿಂಚಣಿ ಯೋಜನೆಯನ್ನು (ಒಪಿಎಸ್) ಜಾರಿ ಮಾಡಲು ಹಿಮಾಚಲ ಪ್ರದೇಶ ಸರ್ಕಾರ ನಿರ್ಧರಿಸಿದೆ.

ಮುಖ್ಯಮಂತ್ರಿ ಸುಖವಿಂದರ್‌ ಸಿಂಗ್‌ ಸುಖು ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಇದರಿಂದ ಸರ್ಕಾರಕ್ಕೆ 2023–24ನೇ ಸಾಲಿನಲ್ಲಿ ₹1,000 ಕೋಟಿ ಹೊರೆಯಾಗಲಿದೆ.

‘2003 ಮೇ 15ರ ನಂತರ ನಿವೃತ್ತರಾದ ಉದ್ಯೋಗಿಗಳು ಹಳೆ ಪಿಂಚಣಿ ವ್ಯವಸ್ಥೆಗೆ ಒಳಪಡಲಿದ್ದಾರೆ. ಹೊಸ ಪಿಂಚಣಿ ವ್ಯವಸ್ಥೆಯಲ್ಲಿರಲು ಬಯಸುವ ಉದ್ಯೋಗಿಗಳು ಸರ್ಕಾರದ ಅನುಮತಿ ಪಡೆಯಬೇಕಾಗುತ್ತದೆ’ ಎಂದು ತಿಳಿಸಲಾಗಿದೆ.

ಉದ್ಯೋಗಿಗಳನ್ನು ಸಾಮಾನ್ಯ ಪ್ರಾವಿಡೆಂಟ್ ಫಂಡ್ (ಜಿಪಿಎಫ್) ವ್ಯಾಪ್ತಿಗೆ ತರಲು ಸಂಪುಟ ನಿರ್ಧರಿಸಿದೆ ಎಂದೂ ಹೇಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT