ಶಿಮ್ಲಾ : ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯ ರಿಷಿ ಡೋಗ್ರಿ ಕಣಿವೆಯ ಎತ್ತರದ ಪ್ರದೇಶಗಳಲ್ಲಿ ಬುಧವಾರ ಸಂಜೆ ಮೇಘಸ್ಫೋಟದಿಂದ ಹಠಾತ್ ಪ್ರವಾಹವು ಸಂಭವಿಸಿತು. ಪ್ರವಾಹದಲ್ಲಿ ಸಿಲುಕಿದ ನಾಲ್ವರು ನಾಗರಿಕರನ್ನು ರಕ್ಷಿಸಲಾಗಿದ್ದು, ಅದರಲ್ಲಿ ಒಬ್ಬರು ಗಾಯಗೊಂಡಿದ್ದಾರೆಂದು ಸೇನೆಯು ಅಧಿಕೃತ ಮಾಹಿತಿ ನೀಡಿದೆ.

ಸಟ್ಲೆಜ್ ನದಿಗೆ ಅಡ್ಡಲಾಗಿ ಇರುವ ಸೇತುವೆ ಜಲಾವೃತವಾಗಿದ್ದರಿಂದ ತಾತ್ಕಾಲಿಕ ರಸ್ತೆ ನಿರ್ಮಿಸಿದ ಸೇನೆ, ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿತು ಎಂದು ಸೇನೆಯು ಹೇಳಿದೆ.

ಕಿನ್ನೌರ್ ಪೊಲೀಸ್ ವರಿಷ್ಠಾಧಿಕಾರಿಯಿಂದ ತುರ್ತು ಮನವಿಯನ್ನು ಸ್ವೀಕರಿಸುತ್ತಿದ್ದಂತೆ, ಸೇನೆಯು ತಕ್ಷಣವೇ ಮಾನವೀಯ ನೆರವು ಮತ್ತು ವಿಪತ್ತು ಪರಿಹಾರ (ಎಚ್ಎಡಿಆರ್) ತಂಡವನ್ನು ನಿಯೋಜಿಸಿ, ನದಿಯ ದೂರದ ದಂಡೆಯಲ್ಲಿ ಸಿಲುಕಿಕೊಂಡಿದ್ದ ನಾಲ್ವರನ್ನು ರಕ್ಷಿಸಿ, ಗಾಯಗೊಂಡ ವ್ಯಕ್ತಿಯನ್ನು ರೆಕಾಂಗ್ ಪಿಯೊದ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿತು.

ಲಾಜಿಸ್ಟಿಕ್ಸ್ ಡ್ರೋನ್ ಹೈ ಆಲ್ಟಿಟ್ಯೂಡ್ (LDHA) ವ್ಯವಸ್ಥೆ ಮೂಲಕ ಪ್ರವಾಹದಲ್ಲಿ ಸಿಲುಕಿರುವ ಸಂತ್ರಸ್ತರಿಗೆ ಅಗತ್ಯ ವಸ್ತುಗಳನ್ನು ತಲುಪಿಸಲಾಗಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.