ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹಿಮಾಚಲ ಪ್ರದೇಶ ಚುನಾವಣೆ: ಶೇ 65.92ರಷ್ಟು ಮತದಾನ

Last Updated 12 ನವೆಂಬರ್ 2022, 19:31 IST
ಅಕ್ಷರ ಗಾತ್ರ

ಶಿಮ್ಲಾ: ಹಿಮಾಚಲ ಪ್ರದೇಶ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಶನಿವಾರ ಸಂಜೆ 5 ಗಂಟೆಯವರೆಗೆ ಶೇ 65.92ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗವು ತಿಳಿಸಿದೆ. ಎಷ್ಟು ಮತದಾನ ಆಗಿದೆ ಎಂಬ ನಿಖರ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ. 2017ರ ಚುನಾವಣೆಯಲ್ಲಿ ಶೇ 74.6ರಷ್ಟು ಮತದಾನ ಆಗಿತ್ತು.

ಹಿಮಾಚಲ ಪ್ರದೇಶದಲ್ಲಿ ಆಡಳಿತಾರೂಢ ಬಿಜೆಪಿ ಮತ್ತು ವಿರೋಧ ಪಕ್ಷ ಕಾಂಗ್ರೆಸ್ ನಡುವೆ ನೇರ ಹಣಾಹಣಿ ಇದೆ.1985ರ ಬಳಿಕ, ಈ ರಾಜ್ಯದಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಪ‍ರ್ಯಾಯವಾಗಿ ಆಡಳಿತ ನಡೆಸಿವೆ. ಪ್ರತಿ ಬಾರಿಯೂ ಆಡಳಿತ ಪಕ್ಷವನ್ನು ಜನರು ಸೋಲಿಸಿದ್ದಾರೆ. ಈ ಪ್ರವೃತ್ತಿಯನ್ನು ಬದಲಾಯಿಸಿ ದಾಖಲೆ ಸೃಷ್ಟಿಸುವ ಉಮೇದಿನಲ್ಲಿ ಬಿಜೆಪಿ ಇದೆ. ಆದರೆ, ಈವರೆಗಿನ ಪ್ರವೃತ್ತಿಯಂತೆ, ಮತ್ತೆ ಅಧಿಕಾರಕ್ಕೆ ಏರುವ ಉತ್ಸಾಹ ಕಾಂಗ್ರೆಸ್‌ ಪಕ್ಷದಲ್ಲಿ ಇದೆ.

ರಾಜ್ಯದ ಎಲ್ಲೆಡೆ ಮತದಾನ ಶಾಂತಿಯುತವಾಗಿ ನಡೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT