ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ: ಹಲವೆಡೆ ಭೂಕುಸಿತ, ರಾಷ್ಟ್ರೀಯ ಹೆದ್ದಾರಿ ಬಂದ್

Published 22 ಜುಲೈ 2023, 4:55 IST
Last Updated 22 ಜುಲೈ 2023, 4:55 IST
ಅಕ್ಷರ ಗಾತ್ರ

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಹಲವೆಡೆ ಭೂಕುಸಿತ ಸಂಭವಿಸಿದೆ.

ಕಿನ್ನೌರ್ ಜಿಲ್ಲೆಯ ವಾಂಗ್ಟು ಬಳಿ ಭೂಕುಸಿತದಿಂದಾಗಿ ಐದು ರಾಷ್ಟ್ರೀಯ ಹೆದ್ದಾರಿಗಳನ್ನು ಮುಚ್ಚಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಇಂದಿನಿಂದ ಮುಂದಿನ ಮೂರು ದಿನ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಹಲವು ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.

ಚಂಬಾ, ಕಂಗ್ರಾ, ಶಿಮ್ಲಾ, ಕುಲು, ಮಂಡಿ, ಬಿಲಾಸ್‌ಪುರ್, ಸೋಲನ್ ಮತ್ತು ಸಿರ್‌ಮೌರ್ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದ್ದು, ಉನಾ, ಹಮೀರ್‌ಪುರ್, ಲಾಹೌಲ್ ಮತ್ತು ಕಿನ್ನೌರ್ ಜಿಲ್ಲೆಗಳಲ್ಲಿ ಅತಿ ಹೆಚ್ಚು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಹಾರಾಷ್ಟ್ರದಲ್ಲಿ ಮುಂದುವರಿದ ಮಳೆ ಆರ್ಭಟ: ಮಹಾರಾಷ್ಟ್ರದ ಹಲವೆಡೆ ಭಾರಿ ಮಳೆಯಾಗುತ್ತಿದ್ದು, ರಾಯಗಡ ಜಿಲ್ಲೆಯ ಖಾಲಾಪುರ ತಾಲ್ಲೂಕಿನ ಇರ್ಶಾಲ್‌ವಾಡಿ ಗ್ರಾಮದಲ್ಲಿ ಸಂಭವಿಸಿದ ಭಾರಿ ಭೂಕುಸಿತದಿಂದ ಮೃತಪಟ್ಟವರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ.

ಇಂದು ನಾಗ್ಪುರ, ವಾರ್ಧಾ, ಯವತ್ಮಾಲ್, ಚಂದ್ರಾಪುರ, ಗಡ್‌ಚಿರೋಲಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಿಂಚು ಸಂಭವಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಯವತ್ಮಾಲ್ ಜಿಲ್ಲೆಯ ಹಲವೆಡೆ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT