ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮ ಪ್ರಾಣ ಪ್ರತಿಷ್ಠಾಪನೆಗೆ ಹೋಗುವೆ: ಹಿಮಾಚಲ ಕಾಂಗ್ರೆಸ್‌ ಸಚಿವ ವಿಕ್ರಮಾದಿತ್ಯ

Published 8 ಜನವರಿ 2024, 13:12 IST
Last Updated 8 ಜನವರಿ 2024, 13:12 IST
ಅಕ್ಷರ ಗಾತ್ರ

ಶಿಮ್ಲಾ: ಜನವರಿ 22ರಂದು ಆಯೋಧ್ಯೆಯ ರಾಮ ಮಂದಿರದಲ್ಲಿ ನಡೆಯುವ ರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗಿಯಾಗುವುದಾಗಿ ಹಿಮಾಚಲ ಪ್ರದೇಶದ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿರುವ ವಿಕ್ರಮಾದಿತ್ಯ ಸಿಂಗ್‌ ಹೇಳಿದ್ದಾರೆ.

ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ಅವರ ಪುತ್ರನಾಗಿರುವ ವಿಕ್ರಮಾದಿತ್ಯ ಸಿಂಗ್‌, ರಾಮ ಪ್ರಾಣ ಪ್ರತಿಷ್ಠಾಪನೆಗೆ ಆಹ್ವಾನ ನೀಡಿದ್ದಕ್ಕಾಗಿ ಆರ್‌ಎಸ್‌ಎಸ್‌ ಹಾಗೂ ವಿಶ್ವ ಹಿಂದೂ ಪರಿಷತ್‌ಗೆ ಧನ್ಯವಾದ ಸಲ್ಲಿಸಿದ್ದಾರೆ.

‘ಇದು ರಾಜಕೀಯ ವಿಷಯವಲ್ಲ. ಹಿಮಾಚಲ ಪ್ರದೇಶದಿಂದ ಆಹ್ವಾನಿತರಾಗಿರುವ ಕೆಲವೇ ಮಂದಿಯ ಪೈಕಿ ನಾನೂ ಒಬ್ಬನಾಗಿರುವುದು ಅದೃಷ್ಟವೆಂದೇ ಭಾವಿಸುತ್ತೇನೆ. ನನಗೆ ಹಾಗೂ ನನ್ನ ಕುಟುಂಬಕ್ಕೆ ಈ ಗೌರವ ನೀಡಿದ ಆರ್‌ಎಸ್‌ಎಸ್‌ ಹಾಗೂ ವಿಶ್ವಹಿಂದೂ ಪರಿಷತ್‌ಗೆ ಧನ್ಯವಾದಗಳು’ ಎಂದು ಅವರು ಹೇಳಿದ್ದಾರೆ.

‘ಈ ಐತಿಹಾಸಿಕ ದಿನದಂದು ಭಾಗಿಯಾಗುವುದು ಜೀವಮಾನದ ಅವಕಾಶ. ಓರ್ವ ಹಿಂದೂ ಆಗಿ, ದೇವರಲ್ಲಿ ವಿಶ್ವಾಸ ಇದ್ದವನಾಗಿ, ಶ್ರೀರಾಮ ಪ್ರಾಣ ಪ್ರತಿಷ್ಠಾಪನೆಯಲ್ಲಿ ಭಾಗಿಯಾಗುವುದು ನನ್ನ ಕರ್ತವ್ಯವೆಂದೇ ಭಾವಿಸಿದ್ದೇನೆ’ ಎಂದು ಅವರು ನುಡಿದಿದ್ದಾರೆ.

ಜನವರಿ 4ರಂದೂ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಅವರು, ಅನುಕೂಲ ನೋಡಿಕೊಂಡು ನಿರ್ಧಾರ ಮಾಡುತ್ತೇನೆ ಎಂದು ಹೇಳಿದ್ದರು. ಅಲ್ಲದೆ ತನಗೆ ಆಹ್ವಾನ ಬಂದಿದ್ದರ ಬಗ್ಗೆ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್‌ ಸುಖು ಅವರ ಗಮನಕ್ಕೂ ತಂದಿದ್ದೇನೆ ಎಂದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT