ಶಿಮ್ಲಾ: ಉತ್ತರ ಪ್ರದೇಶ ಮತ್ತು ಉತ್ತರಾಖಂಡದಂತೆ ಹಿಮಾಚಲ ಪ್ರದೇಶದಲ್ಲಿಯೂ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೋಮವಾರ ವಿಶ್ವಾಸ ವ್ಯಕ್ತಪಡಿಸಿದರು.

ಈ ಮೂಲಕಹಿಮಾಚಲ ಪ್ರದೇಶ ಮತ್ತು ಗುಜಾರಾತ್‌ನಲ್ಲಿ ಚುನಾವಣೆ ಸಮಯದಲ್ಲಿ ಬಿಜೆಪಿ ಸದ್ದು ಮಾಡುತ್ತದೆ, ಆದರೆ ಕೊನೆಯಲ್ಲಿ ಹಲವು ಕ್ಷೇತ್ರಗಳಲ್ಲಿ ಠೇವಣಿಯನ್ನೂ ಕಳೆದುಕೊಳ್ಳುತ್ತದೆ ಎಂದ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಹೇಳಿಕೆಗೆ ತಿರುಗೇಟು ನೀಡಿದರು.

‘ಆಮ್ ಆದ್ಮಿ ಪಕ್ಷ ಪ್ರತಿ ಬಾರಿ ಚುನಾವಣೆ ವೇಳೆ ಸದ್ದು ಮಾಡುತ್ತದೆ. ಉತ್ತರ ಪ್ರದೇಶ, ಗೋವಾ ಮತ್ತು ಉತ್ತರಾಖಂಡದಲ್ಲಿ ನೀವದನ್ನು ನೋಡಿದ್ದೀರಿ. ಅನಂತರ ಏನಾಯಿತು? ಹಲವು ಕ್ಷೇತ್ರಗಳಲ್ಲಿ ಠೇವಣಿಯನ್ನೂ ಕಳೆದುಕೊಂಡಿತು’ ಎಂದು ಹೇಳಿದರು.

ಇದೇ ವೇಳೆ, ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್ ಪ್ರಮುಖ ಪ್ರತಿಸ್ಪರ್ಧಿ. ಎರಡೂ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ.ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಜನರು ಇಟ್ಟಿರುವ ಪ್ರೀತಿ ಮತ್ತು ನಂಬಿಕೆಯೇ ಈ ವಿಶ್ವಾಸಕ್ಕೆ ಕಾರಣ ಎಂದು ಹೇಳಿದರು.

ಡಬಲ್ ಎಂಜಿನ್ ಸರ್ಕಾರಕ್ಕೆ ಇಂಧನ ತುಂಬಿಸುವುದು ಮರೆತಿರಬೇಕು: ಪ್ರಿಯಾಂಕಾ ಗಾಂಧಿ

ಉನಾ: ಹಿಮಾಚಲ ಪ್ರದೇಶದಲ್ಲಿ ಕಳೆದ ಐದು ವರ್ಷಗಳಿಂದಲೂ ಬಿಜೆಪಿಯ ‘ಡಬಲ್ ಎಂಜಿನ್’ ಸರ್ಕಾರ ಅಸ್ತಿತ್ವದಲ್ಲಿದೆ. ಆದರೆ, ಬಹುಶಃ ಇಂಧನ ತುಂಬಿಸುವುದನ್ನು ಮರೆತಿರಬೇಕು ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಲೇವಡಿ ಮಾಡಿದರು.

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನಡೆಯುತ್ತಿರುವ ಪಕ್ಷದ ರ‍್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ‘ಜನರು ಕಾಯಿಲೆಗೆ ತುತ್ತಾಗಿದ್ದಾರೆ ಮತ್ತು ಹಳೆಯ ಔಷಧವನ್ನೇ ಪಡೆಯಿರಿ ಎಂದು ಹೇಳಲಾಗುತ್ತಿದೆ ಎಂದು ಹೇಳಿದರು. ಈ ಮೂಲಕ ಪದೇ ಪದೇ ಔಷಧವನ್ನು ಬದಲಾಯಿಸುವುದರಿಂದ ಕಾಯಿಲೆ ಗುಣಮುಖವಾಗುವುದಿಲ್ಲ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ತಿರುಗೇಟು ನೀಡಿದರು.

‘ಉದ್ಯೋಗ ನೀಡುವುದು ಸರ್ಕಾರದ ಜವಾಬ್ದಾರಿ. ಆದರೆ ರಾಜ್ಯ ಮತ್ತು ಕೇಂದ್ರ ಎರಡೂ ಕಡೆಗಳಲ್ಲಿ ಬಿಜೆಪಿ ಅಧಿಕಾರದಲ್ಲಿ ಇದ್ದರೂ ಹಿಮಾಚಲ ಪ್ರದೇಶದಲ್ಲಿ 63,000 ಹುದ್ದೆಗಳು ಖಾಲಿ ಇವೆ’ ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.

ಕಾಂಗ್ರೆಸ್‌ಗೆ ದೇಶದ ಭದ್ರತೆ ಬಗ್ಗೆ ಕಾಳಜಿ ಇಲ್ಲ: ಯೋಗಿ ಆದಿತ್ಯನಾಥ್

ಹರೋಲಿ: ರಾಮ ಮಂದಿ ನಿರ್ಮಾಣ, ಸರ್ಜಿಕಲ್ ಸ್ಟ್ರೈಕ್ ಅಥವಾ 370ನೇ ವಿಧಿ ರದ್ಧತಿಗೆ ಕಾಂಗ್ರೆಸ್ ಯಾವುದೇ ಕ್ರಮ ತೆಗೆದುಕೊಳ್ಳಲಿಲ್ಲ. ದೇಶದ ಭದ್ರತೆ ಮತ್ತು ಜನರ ಭಾವನೆಗಳ ಬಗ್ಗೆ ಕಾಂಗ್ರೆಸ್‌ಗೆ ಕಾಳಜಿ ಇಲ್ಲ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೋಮವಾರ ಹೇಳಿದರು.

ಇಲ್ಲಿ ಬಿಜೆಪಿ ಪರ ಪ್ರಚಾರ ಮಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಭಾರತ ಉನ್ನತಿ ಕಾಣುತ್ತಿದೆ. ಜಾಗತಿಕ ಮಟ್ಟದಲ್ಲಿ ಭಾರತದ ಗೌರವ ಎತ್ತರಕ್ಕೇರುತ್ತಿದೆ ಎಂದು ಹೇಳಿದರು.

ಮತ್ತೆ 12 ಅಭ್ಯರ್ಥಿಗಳ ಹೆಸರು ಘೋಷಿಸಿದ ಎಎಪಿ

ಅಹಮದಾಬಾದ್ (ಪಿಟಿಐ): ಗುಜರಾತ್ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತ್ತೆ 12 ಅಭ್ಯರ್ಥಿಗಳ ಹೆಸರುಗಳನ್ನು ಆಮ್ ಆದ್ಮಿ ಪಕ್ಷ (ಎಎಪಿ) ಸೋಮವಾರ ಪ್ರಕಟಿಸಿದೆ. ಇದರಲ್ಲಿಪಾಟೀದಾರ್ ಮೀಸಲಾತಿ ಹೋರಾಟದಲ್ಲಿ ಭಾಗಿಯಾಗಿದ್ದ ಅಲ್ಪೇಶ್ ಕಥೀರಿಯಾ ಹೆಸರೂ ಸೇರಿದೆ.

ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿಗೆ ಪ್ರಬಲ ಪ್ರತಿಸ್ಪರ್ಧಿ ಎಂದು ಬಿಂಬಿಸಿಕೊಳ್ಳುತ್ತಿರುವ ಎಎಪಿ ಸೋಮವಾರ ತನ್ನ ಅಭ್ಯರ್ಥಿಗಳ 11ನೇ ಪಟ್ಟಿಯನ್ನು ಬಿಡುಗಡೆ ಮಾಡಿತು.

ಒಟ್ಟು 182 ವಿಧಾನಸಭಾ ಕ್ಷೇತ್ರಗಳ ಪೈಕಿಎಎಪಿ, ಈವರೆಗೆ 130 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.ಕಥೀರಿಯಾ ಅವರು ಪಾಟೀದಾರ್ ಪ್ರಾಬಲ್ಯ ಹೊಂದಿರುವ ಸೂರತ್ ನಗರದ ವರಚ್ಚಾ ರಸ್ತೆ ಕ್ಷೇತ್ರದ ಟಿಕೆಟ್ ನೀಡುವ ಸಾಧ್ಯತೆ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.