ಕೋಲ್ಕತ್ತ: ಪಶ್ಚಿಮ ಬಂಗಾಳದ ಸಂಪನ್ಮೂಲವನ್ನು ಮಮತಾ ಬ್ಯಾನರ್ಜಿ ಸರ್ಕಾರವು ಬಾಂಗ್ಲಾದೇಶದ ಮುಸ್ಲಿಂ ನುಸುಳುಕೋರರಿಗೆ ಬಳಸುತ್ತಿದೆ. ಮಮತಾ ಅವರನ್ನು ಅಧಿಕಾರದಿಂದ ಇಳಿಸದಿದ್ದರೆ, ನಾವು ಪಶ್ಚಿಮ ಬಂಗಾಳವನ್ನು ಕಳೆದುಕೊಳ್ಳುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಶನಿವಾರ ಹೇಳಿದರು.

ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ‘ಮಮತಾ ಬ್ಯಾನರ್ಜಿ ಅವರು ಮತಕ್ಕಾಗಿ ಬಾಂಗ್ಲಾದೇಶದ ಮುಸ್ಲಿಮರಿಗೆ ಭೂಮಿಯನ್ನು ಮಾರುತ್ತಿದ್ದಾರೆ. ಅವರು ಮುಖ್ಯಮಂತ್ರಿಯಾದ ಬಳಿಕ ಇಡೀ ಬಂಗಾಳವನ್ನು ನಾಶ ಮಾಡುತ್ತಿದ್ದಾರೆ. ಅವರನ್ನು ಅಧಿಕಾರದಿಂದ ಇಳಿಸದಿದ್ದರೆ, ಮುಂದೊಂದು ದಿನ ಬಾಂಗ್ಲಾದೇಶ ಮುಸ್ಲಿಮರು ನಮ್ಮಿಂದ ರಾಜ್ಯವನ್ನು ಕಸಿದುಕೊಳ್ಳುತ್ತಾರೆ’ ಎಂದು ಹೇಳಿದರು.

‘ಮಮತಾ ಆಡಳಿತದಲ್ಲಿ ಉತ್ತರ ಬಂಗಾಳ ಅಭಿವೃದ್ಧಿ ಹೊಂದಿಲ್ಲ. ಬಿಜೆಪಿ ಅಧಿಕಾರಕ್ಕೆ ಬಂದರೆ ಬಾಂಗ್ಲಾದೇಶಿ ನುಸುಳುಕೋರರನ್ನು ಹೊರಹಾಕುತ್ತೇವೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.