ಪಿಟಿಐ

ಗಾಜಿಯಾಬಾದ್: ಖಡ್ಗಗಳನ್ನು ವಿತರಿಸಿದ ಮತ್ತು ಕೋಮು ಸಾಮರಸ್ಯಕ್ಕೆ ಅಡ್ಡಿಪಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಇಲ್ಲಿನ 80 ಅಡಿ ರಸ್ತೆ ಪ್ರದೇಶದಲ್ಲಿ ಹಿಂದೂ ರಕ್ಷಾ ದಳದ ಅಧ್ಯಕ್ಷ ಭೂಪೇಂದ್ರ ಚೌಧರಿ ಅಲಿಯಾಸ್ ಪಿಂಕಿ ಮತ್ತು ಅವರ ಪುತ್ರ ಹರ್ಷ ಚೌಧರಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳು ಮತ್ತು ಅವರ ಸಹಚರರು ಮೆರವಣಿಗೆ ಆಯೋಜಿಸಿ, ಪ್ರಚೋದನಕಾರಿ ಘೋಷಣೆ ಕೂಗಿದ್ದಾರೆ. ಸಾರ್ವಜನಿಕ ಸಾಮರಸ್ಯವನ್ನು ಹದಗೆಡಿಸುತ್ತಿದ್ದಾರೆ ಎಂದು ಪೊಲೀಸ್ ಹೊರ ಠಾಣೆ ಪ್ರಭಾರ ಸಬ್ ಇನ್ಸ್ಪೆಕ್ಟರ್ ಪ್ರದೀಪ್ಕುಮಾರ್ ಮಂಗಳವಾರ ನೀಡಿದ್ದ ದೂರು ಆಧರಿಸಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಡಿಸಿಪಿ ನಿಮಿಷ್ ಪಾಟೀಲ್ ಅವರು ಬುಧವಾರ ತಿಳಿಸಿದರು.

ಭೂಪೇಂದ್ರ ಚೌಧರಿ ಸಾಮಾಜಿಕ ಮಾಧ್ಯಮಗಳಲ್ಲಿ ಹಲವು ವಿಡಿಯೊಗಳನ್ನು ಹಾಕಿದ್ದರು. ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬಗಳ ಮೇಲೆ ನಡೆಯುತ್ತಿರುವ ದಾಳಿಗೆ ಪ್ರತೀಕಾರವಾಗಿ ಶಸ್ತ್ರಗಳನ್ನು ವಿತರಿಸುತ್ತಿರುವುದಾಗಿ, ಸಾರ್ವಜನಿಕರು ಶಸ್ತ್ರಾಸ್ತ್ರ ಹಿಡಿಯುವಂತೆಯೂ ಪ್ರಚೋದಿಸಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ಭೂಪೇಂದ್ರ ಚೌಧರಿ ವಿರುದ್ಧ ಹಲವು ಪೊಲೀಸ್ ಠಾಣೆಗಳಲ್ಲಿ 27 ಪ್ರಕರಣಗಳಿದ್ದರೆ, ಪುತ್ರನ ವಿರುದ್ಧ ಮೂರು ಪ್ರಕರಣಗಳಿವೆ. ನ್ಯಾಯಾಲಯ ಇಬ್ಬರನ್ನೂ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಡಿಸಿಪಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.