ಅಯೋಧ್ಯೆ (ಉತ್ತರ ಪ್ರದೇಶ): ಬಾಂಗ್ಲಾದೇಶದಲ್ಲಿ ಹಿಂದೂಗಳನ್ನು ಗುರಿಯಾಗಿಸಲಾಗಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬುಧವಾರ ಆರೋಪಿಸಿದರು.

ಇದೇ ಸಂದರ್ಭದಲ್ಲಿ, ಸನಾತನ ಧರ್ಮಕ್ಕೆ ಎದುರಾಗಿರುವ ಬೆದರಿಕೆ ವಿರುದ್ಧ ಒಟ್ಟಾಗಿ ಹೋರಾಡೋಣ ಎಂದು ಕರೆನೀಡಿದರು.

‘ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವು ಗಮ್ಯ ಅಲ್ಲ, ಮೈಲಿಗಲ್ಲು ಅಷ್ಟೆ’ ಎಂದು ಹೇಳಿದರು.

ಶ್ರೀ ರಾಮಜನ್ಮಭೂಮಿ ತೀರ್ಥಕ್ಷೇತ್ರದ ಪ್ರಥಮ ಅಧ್ಯಕ್ಷರಾದ ಬ್ರಹ್ಮಾಲಿನ್ ಪರಮಹಂಸ ರಾಮಚಂದ್ರ ದಾಸ್ ಅವರ 21ನೇ ಪುಣ್ಯಸ್ಮರಣೆ ಅಂಗವಾಗಿ ಅವರ ಪ್ರತಿಮೆಯನ್ನು ಅನಾವರಣ ಮಾಡಿ ಗೌರವ ನಮನ ಸಲ್ಲಿಸಿದರು.

ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ಉಲ್ಲೇಖಿಸಿ ಮಾತನಾಡಿದ ಅವರು, ‘ಇಂದು ಭಾರತದ ನೆರೆಯವರೆಯಲ್ಲ ಬೆಂಕಿಗೆ ಆಹುತಿಯಾಗುತ್ತಿದ್ದಾರೆ, ದೇಗುಲಗಳನ್ನು ಧ್ವಂಸ ಮಾಡಲಾಗುತ್ತಿದೆ. ಹಿಂದೂಗಳನ್ನು ಗುರಿಯಾಗಿಸಲಾಗಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.