ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕ್ ಆಕ್ರಮಿತ ಕಾಶ್ಮೀರದ ಹಿಂದೂಗಳು, ಮುಸ್ಲಿಮರು ಭಾರತೀಯರು: ಅಮಿತ್ ಶಾ

Published 16 ಮಾರ್ಚ್ 2024, 2:06 IST
Last Updated 16 ಮಾರ್ಚ್ 2024, 2:06 IST
ಅಕ್ಷರ ಗಾತ್ರ

ನವದೆಹಲಿ: ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಭಾರತದ ಭಾಗವಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಅವರ ಧರ್ಮ ಯಾವುದೇ ಆದರೂ ಅವರೆಲ್ಲರು ಭಾರತೀಯರು ಎಂದು ಹೇಳಿದ್ದಾರೆ.

'ಇಂಡಿಯಾ ಟುಡೇ ಕಾನ್‌ಕ್ಲೇವ್‌'ನಲ್ಲಿ ಈ ಕುರಿತು ಮಾತನಾಡಿದ ಅಮಿತ್ ಶಾ, 'ಪಾಕ್ ಆಕ್ರಮಿತ ಕಾಶ್ಮೀರದವರೆಲ್ಲರೂ ಭಾರತೀಯರು. ಅವರು ಹಿಂದೂ ಅಥವಾ ಮುಸ್ಲಿಂ ಆಗಿರಬಹುದು. ಎಲ್ಲರೂ ನಮ್ಮವರೇ' ಎಂದು ಹೇಳಿದರು.

ಪೌರತ್ವ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿಯವರು 2019ರ ಡಿಸೆಂಬರ್‌ನಲ್ಲಿ ಅಂಕಿತ ಹಾಕಿದ್ದರು. ಆದರೆ ಚುನಾವಣೆಯಲ್ಲಿ ಲಾಭ ಪಡೆಯುವ ಉದ್ದೇಶದಿಂದ ನಾಲ್ಕು ವರ್ಷಗಳ ಬಳಿಕ ಸಿಎಎ ಜಾರಿಗೆ ತರಲಾಗಿದೆ ಎಂಬ ವಿಪಕ್ಷಗಳ ಆರೋಪಗಳನ್ನು ಅಮಿತ್ ಶಾ ತಳ್ಳಿ ಹಾಕಿದರು.

'ದೇಶ ವಿಭಜನೆಯ ಸಂದರ್ಭದಲ್ಲಿ ಭಾರತದ ಮೊದಲ ಪ್ರಧಾನಿ ಜವಾಹರಲಾಲ್‌ ನೆಹರೂ ಸೇರಿದಂತೆ ಪಾಕಿಸ್ತಾನದ ನಾಯಕರು ಪಾಕಿಸ್ತಾನದ ಅಲ್ಪಸಂಖ್ಯಾತರನ್ನು ಭಾರತಕ್ಕೆ ಸ್ವಾಗತಿಸಲಾಗುವುದು ಎಂದು ಹೇಳಿದ್ದರು. ಕಾಂಗ್ರೆಸ್ ನಾಯಕರೇ ನೀಡಿದ್ದ ಭರವಸೆಯನ್ನೇ ನಾವೀಗ ಈಡೇರಿಸಿದ್ದೇವೆ ಎಂದು ಹೇಳಿದರು.

'ಸಿಎಎಯಿಂದಾಗಿ ಯಾರೂ ಪೌರತ್ವ ಕಳೆದುಕೊಳ್ಳುವುದಿಲ್ಲ. ವಿಪಕ್ಷಗಳ ಮಾತಿಗೆ ಕಿವಿಕೊಡಬೇಡಿ ಎಂದು ನಾನು ಮುಸ್ಲಿಂ ಸಹೋದರ-ಸಹೋದರಿಯರನ್ನು ಕೇಳಿಕೊಳ್ಳುತ್ತೇನೆ. ವಿಪಕ್ಷಗಳು ರಾಜಕೀಯ ಲಾಭ ಪಡೆಯಲು ಬಯಸುತ್ತವೆ' ಎಂದು ತಿರುಗೇಟು ನೀಡಿದರು.

'ಮುಸ್ಲಿಮರನ್ನು ಸಿಎಎ ವ್ಯಾಪ್ತಿಯಿಂದ ಹೊರಗಿಡುವ ಬಗ್ಗೆ ಕೇಳಿದಾಗ ಈ ಎಲ್ಲ ಮೂರು ದೇಶಗಳನ್ನು ಇಸ್ಲಾಮಿಕ್ ದೇಶವೆಂದು ಘೋಷಿಸಲಾಗಿದೆ. ಅಲ್ಲಿ ಮುಸ್ಲಿಮರು ಶೋಷಣೆಯನ್ನು ಎದುರಿಸಲು ಸಾಧ್ಯವಿಲ್ಲ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT