ಚೆನ್ನೈ: ಗರ್ಭಿಣಿಯೊಬ್ಬರಿಗೆ ಎಚ್‌ಐವಿ ಸೋಂಕಿತ ವ್ಯಕ್ತಿಯ ರಕ್ತ ವರ್ಗಾವಣೆ ಮಾಡಿದ ಪ್ರಕರಣ ಇನ್ನೂ ಹಸಿರಾಗಿರುವಾಗಲೇ ಇದೇ ರೀತಿಯ ಇನ್ನೊಂದು ಪ್ರಕರಣ ನಡೆದಿದಿದೆ.

ವಿರುಧುನಗರ ಜಿಲ್ಲೆಯಲ್ಲಿ ಆಸ್ಪತ್ರೆಯ ಸಿಬ್ಬಂದಿ ಅಚಾತುರ್ಯದಿಂದ ಗರ್ಭಿಣಿಯೊಬ್ಬರಿಗೆ ರಕ್ತ ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು. ಚೆನ್ನೈನ ಸರ್ಕಾರಿ ಕಿಲ್ಪಾಕ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ 20 ವರ್ಷದ ಮಹಿಳೆಯೊಬ್ಬರು ತಮಗೆ ವರ್ಗಾವಣೆ ಮಾಡಿದ್ದ ರಕ್ತದಿಂದ ಎಚ್‌ಐವಿ ಸೋಂಕು ತಗುಲಿದೆ ಎಂದು ಆರೋಪಿಸಿದ್ದಾರೆ.

‘ದೇಹದಲ್ಲಿ ಹಿಮೊಗ್ಲೊಬಿನ್ ಪ್ರಮಾಣ ಕಡಿಮೆಯಿದ್ದು, ರಕ್ತ ಪಡೆಯಲು ವೈದ್ಯರು ಸೂಚಿಸಿದ್ದರು. ಹೀಗಾಗಿ, ರಕ್ತ ಪಡೆದಿದ್ದೆ’ ಎಂದು ಅವರು ತಿಳಿಸಿದ್ದಾರೆ.

‘ನಾನು ಐದು ತಿಂಗಳ ಗರ್ಭಿಣಿಯಾಗಿದ್ದಾಗ ಖಾಸಗಿ ಆಸ್ಪತ್ರೆಯಲ್ಲಿ ಕಳೆದ ಮೇ ತಿಂಗಳಲ್ಲಿ ರಕ್ತ ತಪಾಸಣೆ ಮಾಡಿದಾಗ ಎಚ್‌ಐವಿ ಸೋಂಕು ಇರಲಿಲ್ಲ. ಖಾಸಗಿ ಆಸ್ಪತ್ರೆಯಲ್ಲಿ ದುಬಾರಿ ಶುಲ್ಕ ಭರಿಸಲು ಸಾಧ್ಯವಾಗದ ಕಾರಣ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೆ. ಆದರೆ, ಕಳೆದ ಆಗಸ್ಟ್‌ನಲ್ಲಿ ರಕ್ತ ಪರೀಕ್ಷಿಸಿದ ವೈದ್ಯರು ನನಗೆ ಎಚ್‌ಐವಿ ಸೋಂಕು ತಗುಲಿದೆ’ ಎಂದು ಅವರು ದೂರಿದ್ದಾರೆ.

‘ಮಹಿಳೆಗೆ ಸುರಕ್ಷಿತ ರಕ್ತವನ್ನೇ ನೀಡಲಾಗಿತ್ತು. ರಕ್ತ ವರ್ಗಾವಣೆಯಿಂದ ಅವರಿಗೆ ಸೋಂಕು ತಗುಲಿಲ್ಲ’ ಎಂದು ಆಸ್ಪತ್ರೆಯ ಡೀನ್ ಪಿ. ವಸಂತಮಣಿ ಹೇಳಿದ್ದಾರೆ.

‘ಮಹಿಳೆಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸಲಾಗಿದ್ದು, ಮಗು ಸೋಂಕಿಗೆ ತುತ್ತಾಗಿಲ್ಲ’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.