ಭಾನುವಾರ, 13 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹಾಕಿ | ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಗೆದ್ದು ತವರಿಗೆ ಮರಳಿದ ಭಾರತ ತಂಡ

Published : 19 ಸೆಪ್ಟೆಂಬರ್ 2024, 2:59 IST
Last Updated : 19 ಸೆಪ್ಟೆಂಬರ್ 2024, 2:59 IST
ಫಾಲೋ ಮಾಡಿ
Comments

ನವದೆಹಲಿ: ಹೀರೊ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಹಾಕಿ ಟೂರ್ನಿಯಲ್ಲಿ ಚಾಂಪಿಯನ್ ಕಿರೀಟ ಧರಿಸಿ ಭಾರತ ತಂಡ ತವರಿಗೆ ಮರಳಿತು.

ಬುಧವಾರ ತವರಿಗೆ ಮರಳಿದ ತಂಡದ ಆಟಗಾರರನ್ನು ಹಾಕಿ ಇಂಡಿಯಾದ ಅಧಿಕಾರಿಗಳು ಹಾಗೂ ಅಭಿಮಾನಿಗಳು ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಬರಮಾಡಿಕೊಂಡರು.

ನಂತರ ವಿಮಾನ ನಿಲ್ದಾಣದಲ್ಲಿ ಆಟಗಾರರು ಹಾಗೂ ಮ್ಯಾನೇಜಿಂಗ್‌ ಕಮಿಟಿಯ ಸದಸ್ಯರು ಗ್ರೂಪ್‌ ಫೋಟೊ ತೆಗೆಸಿಕೊಂಡರು.

ಫೈನಲ್‌ ‍ಪಂದ್ಯದಲ್ಲಿ ಆತಿಥೇಯ ಚೀನಾ ವಿರುದ್ಧ ಹೋರಾಡಿ 1–0ಯಿಂದ ಭಾರತ ತಂಡ ಚಾಂಪಿಯನ್‌ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು. ಭಾರತ ಐದನೇ ಸಲ ಈ ಪ್ರಶಸ್ತಿ ಗೆದ್ದುಕೊಂಡಿದೆ.

ಈ ಟೂರ್ನಿಯಲ್ಲಿ ಪ್ರಾಬಲ್ಯ ಸಾಧಿಸಿ ಆಡಿದ ಎಲ್ಲಾ ಏಳೂ ಪಂದ್ಯಗಳಲ್ಲಿ ಹರ್ಮನ್‌ಪ್ರೀತ್ ಪಡೆ ಜಯಶಾಲಿಯಾಯಿತು. 

ಕಳೆದ ತಿಂಗಳ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದಿದ್ದ ಭಾರತ ಫೈನಲ್‌ನಲ್ಲಿ ಗೆಲ್ಲುವ ನೆಚ್ಚಿನ ತಂಡವಾಗಿತ್ತು. ಲೀಗ್‌ನಲ್ಲಿ ಚೀನಾ ವಿರುದ್ಧ 3–0 ಗೆಲುವೂ ಸಾಧಿಸಿತ್ತು‌.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT