ನವದೆಹಲಿ: ಕೋವಿಡ್-19 ಸೋಂಕು ತಗುಲಿ ಆಸ್ಪತ್ರೆ ಸೇರಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ನಡೆಸಿದ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದೆ ಎಂದು ಅವರಿಂದು ಟ್ವೀಟ್ ಮಾಡಿದ್ದಾರೆ. ಸೋಂಕಿನಿಂದಾಗಿ ದೆಹಲಿ ಸಮೀಪದ ಗುರುಗ್ರಾಮದಲ್ಲಿರುವ ಮೆದಾಂತ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.

'ಇಂದು ಬಂದ ಕೊರೊನಾ ವೈರಸ್ ಸೋಂಕಿನ ಪರೀಕ್ಷಾ ವರದಿ ನೆಗೆಟಿವ್ ಆಗಿದೆ. ನಾನು ದೇವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಮತ್ತು ಈ ವೇಳೆ ನನಗೆ ಮತ್ತು ನನ್ನ ಕುಟುಂಬಕ್ಕೆ ಶುಭ ಹಾರೈಸುವ ಮೂಲಕ ಆಶೀರ್ವದಿಸಿದ ಎಲ್ಲರಿಗೂ ಹೃತ್ಪೂರ್ವಕ ಕೃತಜ್ಞತೆಯನ್ನು ಅರ್ಪಿಸುತ್ತೇನೆ. ವೈದ್ಯರ ಸಲಹೆಯ ಮೇರೆಗೆ ಇನ್ನೂ ಕೆಲವು ದಿನಗಳವರೆಗೆ ಮನೆಯಲ್ಲಿಯೇ ಕ್ವಾರಂಟೈನ್‌ನಲ್ಲಿರುತ್ತೇನೆ' ಎಂದಿದ್ದಾರೆ.

ಕೊರೊನಾ ಸೋಂಕಿನ ವಿರುದ್ಧ ಹೋರಾಡಲು ನನಗೆ ಸಹಾಯ ಮಾಡಿದ ಮತ್ತು ನನಗೆ ಚಿಕಿತ್ಸೆ ನೀಡುತ್ತಿರುವ ಮೆಗಾಂತ ಆಸ್ಪತ್ರೆಯ ಎಲ್ಲಾ ವೈದ್ಯರು ಮತ್ತು ಅರೆವೈದ್ಯಕೀಯ ಸಿಬ್ಬಂದಿಗೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಸಚಿವ ಸಂಪುಟ ಸಭೆಯ ಭಾಗವಾಗಿದ್ದ 55 ವರ್ಷದ ಅಮಿತ್ ಶಾ ಅವರಿಗೆ ಎರಡು ವಾರಗಳ ಹಿಂದೆಯಷ್ಟೇ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿತ್ತು. ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಪ್ರಮುಖ ಸಚಿವರೆಲ್ಲರೂ ಭಾಗಿಯಾಗಿದ್ದರು. ರಾಷ್ಟ್ರೀಯ ಶಿಕ್ಷಣ ನೀತಿ ಅಥವಾ ಎನ್‌ಇಪಿ ಅಂಗೀಕರಿಸಲ್ಪಟ್ಟ ನಿರ್ಣಾಯಕ ಸಭೆಯಲ್ಲಿ ಸಾಮಾಜಿಕ ದೂರವನ್ನು ಒಳಗೊಂಡಂತೆ ಎಲ್ಲಾ ಸುರಕ್ಷತಾ ಮಾನದಂಡಗಳನ್ನು ಅನುಸರಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.