ಶುಕ್ರವಾರ, 13 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಗುಜರಾತ್: ಬಿಪೊರ್‌ಜಾಯ್ ಚಂಡಮಾರುತ ಬಾಧಿತ ಪ್ರದೇಶಗಳಿಗೆ ಗೃಹ ಸಚಿವ ಅಮಿತ್ ಶಾ ಭೇಟಿ

Published : 17 ಜೂನ್ 2023, 6:48 IST
Last Updated : 17 ಜೂನ್ 2023, 6:48 IST
ಫಾಲೋ ಮಾಡಿ
Comments

ನವದೆಹಲಿ: ಬಿಪೊರ್‌ಜಾಯ್‌ ಚಂಡಮಾರುತ ಬಾಧಿತ ಪ್ರದೇಶಗಳ ಪರಿಸ್ಥಿತಿ ಪರಿಶೀಲನೆಗಾಗಿ ಗುಜರಾತ್‌ನ ಕಛ್‌ ಹಾಗೂ ಜಖೌ ಬಂದರಿಗೆ ಗೃಹ ಸಚಿವ ಅಮಿತ್‌ ಶಾ ಅವರು ಇಂದು (ಶನಿವಾರ) ಭೇಟಿ ನೀಡಲಿದ್ದಾರೆ.

ಈ ಬಗ್ಗೆ ಗೃಹ ಸಚಿವಾಲಯದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮುಖ್ಯಮಂತ್ರಿ ಭೂಪೇಂದ್ರ ಪಟೇಲ್‌ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಶಾ ಸಭೆ ನಡೆಸಲಿದ್ದಾರೆ.

ಚಂಡಮಾರುತ ಬಾಧಿತ ಪ್ರದೇಶಗಳ ವೈಮಾನಿಕ ವೀಕ್ಷಣೆ ಮಾಡಲಿರುವ ಶಾ, ಬಳಿಕ ಕಛ್‌ನಲ್ಲಿರುವ ಜಖೌ ಬಂದರು ಮತ್ತು ಮಾಂದ್ವಿಗೆ ತೆರಳಲಿದ್ದಾರೆ. ಆಶ್ರಯ ಶಿಬಿರಗಳಿಗೆ ಭೇಟಿ ನೀಡಿ, ಸಂತ್ರಸ್ತರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಭುಜ್‌ನಲ್ಲಿರುವ ಸ್ವಾಮಿ ನಾರಾಯಣ್‌ ದೇವಾಲಯಕ್ಕೂ ತೆರಳಲಿರುವ ಗೃಹ ಸಚಿವರು, ಅಲ್ಲಿ ಸಂತ್ರಸ್ತರಿಗೆ ನೀಡಲಾಗುತ್ತಿರುವ ಆಹಾರ ಮತ್ತು ಇತರ ಸೌಕರ್ಯಗಳ ಪರಿಶೀಲನೆ ಮಾಡಲಿದ್ದಾರೆ ಎಂದೂ ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT