ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸ್ಸಾಂ–ಮಿಜೋರಾಂ ಗಡಿ ಹಿಂಸಾಚಾರ: ಅಮಿತ್‌ ಶಾ ವಿರುದ್ಧ ರಾಹುಲ್‌ ವಾಗ್ದಾಳಿ

Last Updated 27 ಜುಲೈ 2021, 5:51 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಜನರಲ್ಲಿ ದ್ವೇಷ ಮತ್ತು ಅಪನಂಬಿಕೆ ಬಿತ್ತುವ ಮೂಲಕ ದೇಶವನ್ನು ‘ವಿಫಲ’ಗೊಳಿಸಿದ್ದು ಈಗ ಇದರ ‍ಭಯಾನಕ ಪರಿಣಾಮಗಳನ್ನು ದೇಶ ಎದುರಿಸುತ್ತಿದೆ’ ಎಂದು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ.

ಅಸ್ಸಾಂ ಮತ್ತು ಮಿಜೋರಾಂ ನಡುವಿನ ಗಡಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮಂಗಳವಾರ ಅಮಿತ್‌ ಶಾ ವಿರುದ್ಧ ರಾಹುಲ್‌ ವಾಗ್ದಾಳಿ ನಡೆಸಿದರು.

‘ಅಸ್ಸಾಂ ಮತ್ತು ಮಿಜೋರಾಂ ನಡುವಿಣ ಗಡಿ ಸಂಘರ್ಷದ ವೇಳೆ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಅಸ್ಸಾಂನ ಕನಿಷ್ಠ ಐವರು ಪೊಲೀಸರು ಮೃತ‍ಪಟ್ಟಿದ್ದಾರೆ. ಪೊಲೀಸ್‌ ವರಿಷ್ಠಾಧಿಕಾರಿ ಸೇರಿದಂತೆ 60ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಮಿಜೋರಾಂ ಪೊಲೀಸರು ಮೊದಲು ತಮ್ಮ ಅಧಿಕಾರಿಗಳು ಮತ್ತು ನಾಗರಿಕರ ಮೇಲೆ ಗುಂಡು ಹಾರಿಸಿದ್ದಾರೆ’ ಎಂದು ಅಸ್ಸಾಂ ಸರ್ಕಾರ ಸೋಮವಾರ ಆರೋಪಿಸಿದೆ.

‘ಅಸ್ಸಾಂನ 200 ಪೊಲೀಸ್‌ ಸಿಬ್ಬಂದಿ ಬಲವಂತವಾಗಿ ಗಡಿ ದಾಟಲು ಪ್ರಯತ್ನಿಸಿದ್ದಾರೆ. ಅಲ್ಲದೆ ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ನಮ್ಮ ಪೊಲೀಸ್‌ ಪಡೆ ಪ್ರತ್ಯುತ್ತರ ನೀಡಿದೆ’ ಎಂದುಮಿಜೋರಾಂ ಗೃಹ ಸಚಿವ ಲಲಚಾಮಲಿಯಾನಾ ಹೇಳಿದ್ದಾರೆ.

ಈ ಬಗ್ಗೆ ಅಸ್ಸಾಂ ಮತ್ತು ಮಿಜೋರಾಂ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿದ ಅಮಿತ್‌ ಶಾ ಅವರು, ‘ವಿವಾದಿತ ಗಡಿಯಲ್ಲಿ ಶಾಂತಿಯನ್ನು ಕಾಪಾಡಿಕೊಳ್ಳಬೇಕು. ಸಮಸ್ಯೆಯನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಿಕೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT