ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

SFI ಪ್ರತಿಭಟನೆ: ಕೇರಳ ರಾಜ್ಯಪಾಲ ಆರೀಫ್‌ ಖಾನ್‌ಗೆ ಝಡ್‌ ಪ್ಲಸ್‌ ಭದ್ರತೆ

Published 27 ಜನವರಿ 2024, 10:13 IST
Last Updated 27 ಜನವರಿ 2024, 10:13 IST
ಅಕ್ಷರ ಗಾತ್ರ

ನವದೆಹಲಿ: ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರಿಗೆ ಝಡ್– ಪ್ಲಸ್ ಶ್ರೇಣಿಯ ಭದ್ರತಾ ವ್ಯವಸ್ಥೆ ಒದಗಿಸಲು ಕೇಂದ್ರ ಗೃಹ ಸಚಿವಾಲಯ ನಿರ್ಧರಿಸಿದೆ ಎಂದು ಕೇರಳ ರಾಜಭವನ ಶನಿವಾರ ತಿಳಿಸಿದೆ.

ಇಂದು ಬೆಳಿಗ್ಗೆ ಕೊಟ್ಟಾರಕ್ಕರದಲ್ಲಿ ಆಯೋಜನೆಗೊಂಡಿದ್ದ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ರಾಜ್ಯಪಾಲ ಆರಿಫ್ ಅವರಿಗೆ ಆಡಳಿತಾರೂಢ ಸಿಪಿಐ(ಎಂ)ನ ವಿದ್ಯಾರ್ಥಿ ಘಟಕ ‘ಸ್ಟೂಡೆಂಟ್ ಫೆಡೆರೇಷನ್ ಆಫ್‌ ಇಂಡಿಯಾ’ದ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದ್ದರು.

ತಮ್ಮ ವಿರುದ್ಧ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ ಎಸ್‌ಎಫ್‌ಐ ಕಾರ್ಯಕರ್ತರನ್ನು ಬಂಧಿಸುವಂತೆ ಒತ್ತಾಯಿಸಿ ಆರಿಫ್ ಅವರು ಕಾರಿನಿಂದ ಇಳಿದು ರಸ್ತೆಯ ಬದಿಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದರು.

ಈ ನಡುವೆ ಘಟನಾ ಸ್ಥಳದಲ್ಲಿ ಜನರು ಜಮಾಯಿಸಿದ್ದರಿಂದ ಗೊಂದಲದ ವಾತಾವರಣ ಸೃಷ್ಟಿಯಾಗಿದ್ದು, ತಕ್ಷಣ ಪೊಲೀಸರು ಕಾರ್ಯಪ್ರವೃತ್ತರಾಗಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದರು.

ಹಿಂದೂ ಬಲಪಂಥೀಯ ಬೆಂಬಲಿಗರನ್ನು ತಮ್ಮ ಸೆನೆಟ್‌ಗಳಿಗೆ ನೇಮಿಸುವ ಮೂಲಕ ರಾಜ್ಯಪಾಲರು ವಿಶ್ವವಿದ್ಯಾಲಯಗಳನ್ನು ಕೇಸರಿಮಯಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಸಿಪಿಐ(ಎಂ) ಆರೋಪಿಸಿದೆ. ಜತೆಗೆ ಸೆಪ್ಟೆಂಬರ್‌ನಲ್ಲಿ ವಿಧಾನಸಭೆ ಅಂಗೀಕರಿಸಿದ ಕೇರಳ ಸರ್ಕಾರದ ಭೂ ಹಂಚಿಕೆ (ತಿದ್ದುಪಡಿ) ಮಸೂದೆಗೆ ಅಂಗೀಕಾರ ನೀಡದೆ ‌ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT